ಸುಂಟಿಕೊಪ್ಪ, ಅ. ೨೬: ಬೀದಿನಾಯಿಗಳ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಜಿಂಕೆಯೊAದು ಮನೆಗೆ ನುಗ್ಗಿ ಅತಂಕ ಸೃಷ್ಟಿಸಿ ನಂತರ ಬೀದಿನಾಯಿಗಳಿಂದಲೇ ಪ್ರಾಣ ಕಳೆದುಕೊಂಡ ಘಟನೆ ನಡೆದಿದಿದೆ.
೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದಲ್ಲಿ ಬೆಳಿಗ್ಗೆ ೮ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಅಟ್ಟಿಸಿಕೊಂಡು ಬಂದ ನಾಯಿಗಳಿಂದ ತಪ್ಪಿಸಿಕೊಳ್ಳಲು ಜಿಂಕೆಯೊAದು ಮುಖ್ಯ ರಸ್ತೆಯಲ್ಲಿರುವ ರಾಧಕೃಷ್ಣಪ್ಪ ಎಂಬವರ ಮನೆಗೆ ನುಗ್ಗಿದೆ. ಈ ಸಂದರ್ಭ ಮನೆಯಲ್ಲಿ ರಾಧ ಅವರ ಸೊಸೆ ಮತ್ತು ಪುಟ್ಟ ಮಗುವಿತ್ತು. ಮನೆಯ ಹಾಲ್ನಲ್ಲಿ ಪ್ರಾಣ ರಕ್ಷಣೆಗಾಗಿ ಓಡಾಡಿದ ಜಿಂಕೆ ಮಗುವಿನ ಆಟದ ಸಾಮಗ್ರಿಗಳನ್ನು ಹಾಳುಗೇಡವಿದೆ. ಬಳಿಕ ಹೊರ ಬಂದ ಜಿಂಕೆ ರಸ್ತೆ ದಾಟಿ ಅರಣ್ಯ ಪ್ರವೇಶಿಸುವಷ್ಟರಲ್ಲಿ ಮತ್ತೆ ನಾಯಿಗಳ ದಾಳಿಗೆ ಒಳಗಾಗಿ ಪ್ರಾಣ ಬಿಟ್ಟಿದೆ.
ವಿಷಯ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿ ಜಿಂಕೆಯ ಮೃತ ದೇಹವನ್ನು ವಾಹನದಲ್ಲಿ ಕೊಂಡೊಯ್ದರು.
ಪತ್ರ್ರಿಕೆಯೊAದಿಗೆ ಮಾತನಾಡಿದ ರಾಧಕೃಷ್ಣಪ್ಪ ಅವರು ವನ್ಯಪ್ರಾಣಿ ಮತ್ತು ಬೀದಿನಾಯಿಗಳ ಹಾವಳಿಯಿಂದ ನಮಗೇನಾದರೂ ತೊಂದರೆಯಾಗಿದ್ದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಜಿ.ಪಂ. ಮಾಜಿ ಸದಸ್ಯ ಆರ್.ಕೆ. ಚಂದ್ರು ಮಾತನಾಡಿ ಬೀದಿ ನಾಯಿಗಳ ಹಾವಳಿಯನ್ನು ಗ್ರಾಮ ಪಂಚಾಯಿತಿ ನಿಯಂತ್ರಿಸಬೇಕಾಗಿದೆ. ಶನಿವಾರ ಕೂಡ ಹಾಡಹಗಲೇ ಗರ್ಭಿಣಿ ಜಿಂಕೆಯೊAದನ್ನು ನಾಯಿಗಳು ಬೇಟೆಯಾಡಿದನ್ನು ಉಲ್ಲೇಖಿಸಿದ ಅವರು ಇಷ್ಟೊಂದು ಪ್ರಾಣಿ ಹಿಂಸೆಯಾಗುತ್ತಿದ್ದರೂ ಇಲಾಖೆಯ ಅಧಿಕಾರಿಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ಬೀದಿ ನಾಯಿಗಳಿಗೆ ಆಹಾರ ಮತ್ತು ಪುನರ್ವಸತಿ ಕೇಂದ್ರವನ್ನು ತೆರೆಯುವಂತಾಗಬೇಕೆAದು ಅವರು ಸಲಹೆಯಿತ್ತರು.
ಉಪವಲಂiÀ ಸÀಂರಕ್ಷಣಾಧಿಕಾರಿ ಕೆ.ಎ. ದೇವಯ್ಯ ಪ್ರತಿಕ್ರಿಯಿಸಿ ಜಿಂಕೆಗಳ ಸಾವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದು ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿಗೆ ಲಿಖಿತ ಮನವಿ ಮಾಡಲಾಗುವುದೆಂದು ಹೇಳಿದರು.
ಈ ಕುರಿತು ಮಾಹಿತಿ ನೀಡಿದ ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್ ಅವರು ಅರಣ್ಯ ಇಲಾಖೆಯ ಮನವಿಯನ್ನು ಆಡಳಿತ ಮಂಡಳಿ ಸಭೆಯಲ್ಲಿಟ್ಟು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.