ಮಡಿಕೇರಿ, ಅ. ೨೬: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಮಡಿಕೇರಿ ನಗರದಲ್ಲಿರುವ ಸಂಸ್ಥೆಯ ಸ್ಕೌಟ್ಸ್, ಗೈಡ್ಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಸ್ಕೌಟ್ಸ್, ಗೈಡ್ಸ್ , ಬುಲ್ ಬುಲ್, ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗಾಗಿ ವೇಷ ಭೂಷಣಗಳೊಂದಿಗೆ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.

ಗೀತಾ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ , ಭಾತೃತ್ವ, ರಾಷ್ಟ್ರೀಯ ಪ್ರಜ್ಞೆ ಹಾಗೂ ರಾಷ್ಟಿçÃಯ ಭಾವೈಕ್ಯತೆ ಬೆಳೆಸುವ ಉದ್ದೇಶದಿಂದ ದೇಶಭಕ್ತಿ ಗೀತೆಯಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಮಡಿಕೇರಿಯಲ್ಲಿ ನ.೨೩ ರಂದು ಮೈಸೂರು ವಿಭಾಗಮಟ್ಟದ ಗೀತಾ ಗಾಯನ ಸ್ಪರ್ಧೆ ನಡೆಯಲಿದ್ದು, ಎಂಟು ಜಿಲ್ಲೆಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬೇಬಿ ಮ್ಯಾಥ್ಯೂ ತಿಳಿಸಿದರು.

ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುತ್ತದೆ. ನಾಡಿನ ಬಗ್ಗೆ ಅಭಿಮಾನ ಉಂಟು ಮಾಡುತ್ತದೆ.

ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡಿ ರಾಷ್ಟಾçಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ಸAಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.

ಗೀತಾ ಗಾಯನ ಸ್ಪರ್ಧೆಯ ಉದ್ದೇಶ ತಿಳಿಸಿದ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ. ಉಷಾರಾಣಿ ಇಂತಹ ಸ್ಪರ್ಧೆಗಳು ಮಕ್ಕಳಿಗೆ ಭವಿಷ್ಯದಲ್ಲಿ ತಮ್ಮನ್ನು ರಾಷ್ಟçಸೇವೆಯಲ್ಲಿ ತೊಡಗಿಸಿಕೊಳ್ಳಲು ವೇದಿಕೆ ಒದಗಿಸುತ್ತವೆ ಎಂದರು.

ವಿದ್ಯಾರ್ಥಿ ಪೋಷಕರಾದ ಶ್ರೀಲತಾ ಮಾತನಾಡಿ, ಪೋಷಕರು ಮಕ್ಕಳ ಇಂತಹ ಸ್ಪರ್ಧೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಸAಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು. ರಂಜಿತ್, ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತೆ ಮೈಥಿಲಿರಾವ್, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎA.ವಸAತಿ, ಕೋಶಾಧಿಕಾರಿ ಟಿ.ಎಂ. ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಕಮೀಷನರ್ ತರಬೇತುದಾರ ಕೆ.ಬಿ. ಗಣೇಶ್, ತೀರ್ಪುಗಾರರಾದ ಲಕ್ಷಿö್ಮ ಈಶ್ವರ್ ಭಟ್, ವೀಣಾ ಹೊಳ್ಳ, ಗೈಡ್ಸ್ ಶಿಕ್ಷಕಿ ಬಿ.ಜಿ. ಜಾಜಿ, ಸ್ಕೌಟ್ಸ್, ಗೈಡ್ಸ್ನ ಶಿಕ್ಷಕರು, ಶಿಕ್ಷಕಿಯರು, ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್, ರೇಂಜರ್ ಮತ್ತು ರೋವರ್ಸ್ನ ವಿದ್ಯಾರ್ಥಿಗಳು, ಪೋಷಕರು ಇದ್ದರು.