ವೀರಾಜಪೇಟೆ, ಅ. ೨೬: ವೀರಾಜಪೇಟೆ ಪುರಸಭೆಗೆ ಹೆಚ್ಚುವರಿಯಾಗಿ ಸೇರ್ಪಡೆಗೊಂಡ ಕಲ್ಲುಬಾಣೆ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕಲ್ಲುಬಾಣೆಯಲ್ಲಿ ಭೂಮಿಪೂಜೆ ನೆರವೇರಿಸಿದರು.
ಕರ್ನಾಟಕ ರಾಜ್ಯ ಸರಕಾರದ ಎಸ್.ಎಫ್.ಸಿ. ಅನುದಾನದಲ್ಲಿ, ವೀರಾಜಪೇಟೆ ಪುರಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ವಿಶೇಷ ಮುತುವರ್ಜಿಯಿಂದ ಮಂಜೂರಾದ ರೂ. ೨೦ ಕೋಟಿಗಳ ವಿಶೇಷ ಅನುದಾನಗಳ ಪೈಕಿ ೨೫ ಲಕ್ಷ ರೂ. ನಲ್ಲಿ ಮುಖ್ಯರಸ್ತೆ ಅಭಿವೃದ್ಧಿ ಹಾಗೂ ಬೀದಿ ದೀಪಗಳ ಅಳವಡಿಕೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ರೂ. ೧೪ ಲಕ್ಷ ಅನುದಾನ ಒದಗಿಸಲಾಗಿದ್ದು ಶಾಸಕರು ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಮಳೆಯಿಂದಾಗಿ ಎಲ್ಲ ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಮಳೆ ಸ್ವಲ್ಪ ಬಿಡುವು ನೀಡಿದ ಕೂಡಲೇ ಕಾಮಗಾರಿಗಳು ಪ್ರಾರಂಭ ಆಗುತ್ತದೆ. ಮುಂದಿನ ದಿನಗಳಲ್ಲಿ ಸರಕಾರದಿಂದ ಇನ್ನಷ್ಟು ಅನುದಾನಗಳನ್ನು ಮಂಜೂರು ಮಾಡಿಸಿ ಕ್ಷೇತ್ರದ ಅಭಿವ್ರದ್ದಿಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಅಭಿಯಂತರಾದ ಹೇಮ್ ಕುಮಾರ್, ಪರಿಸರ ಅಭಿಯಂತರಾದ ರೀತು ಸಿಂಗ್, ಆರೋಗ್ಯ ಅಧಿಕಾರಿ ಕೋಮಲ ಹಾಗೂ ಪುರಸಭೆ ಸಿಬ್ಬಂದಿಗಳು, ಪುರಸಭೆ ಸದಸ್ಯರುಗಳಾದ ಎಸ್.ಹೆಚ್. ಮತೀನ್, ಮಹಮ್ಮದ್ ರಾಫಿ, ಪೃಥ್ವಿನಾಥ್, ಅತಿಫ್ ಮನ್ನ, ಸಿ.ಬಿ. ರವಿ, ರಜಿನಿಕಾಂತ್, ಬೆನ್ನಿ ಆಗಸ್ಟಿನ್, ಹಮೀದ್, ಬಗರ್ ಹುಕುಂ ಸಮಿತಿಯ ಆರ್.ಕೆ. ಸಲಾಂ, ಕಾಂಗ್ರೇಸ್ ವಲಯಾಧ್ಯಕ್ಷ ಜಾಫರ್, ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ, ಸ್ಥಳೀಯರಾದ ನೌಶಾದ್, ಜೋಕಿಮ್, ನರೇಂದ್ರ ಕಾಮತ್, ಚೇಕು, ಕಾಣತಂಡ ಜಗದೀಶ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಶಬೀರ್, ಸ್ಥಳೀಯ ಕಲ್ಲುಬಾಯ್ಸ್ ಯುವಕರ ತಂಡದ ಅಧ್ಯಕ್ಷ ರಹೀಂ, ಫನ್ಸಿರ್ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.