ವೀರಾಜಪೇಟೆ, ಅ. ೨೬: ವೀರಾಜಪೇಟೆ ಪುರಸಭೆಗೆ ಹೆಚ್ಚುವರಿ ಸೇರ್ಪಡೆಯಾಗಿರುವ ಬೋಯಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಚಾಲನೆ ನೀಡಿದರು.

ಶಾಸಕರು ಬೋಯಿಕೇರಿಗೆ ಆಗಮಿಸುತ್ತಿದ್ದಂತೆ ಸ್ಥಳೀಯ ಯುವಕರು ಪಟಾಕಿಸಿಡಿಸಿ ಸಂಭ್ರಮಿಸಿದರಲ್ಲದೆ ಗ್ರಾಮಸ್ಥರ ಸಮ್ಮುಖದಲ್ಲಿ ರೂಪಿಣಿ ಎಂಬುವರು ಆರತಿ ಎತ್ತಿ ಶಾಸಕರನ್ನು ಬರಮಾಡಿಕೊಂಡರು.

ಶಾಸಕರ ವಿಶೇಷ ಪ್ರಯತ್ನದಿಂದ ಪುರಸಭೆ ವಾಪ್ತಿಯ ವಿವಿಧ ಕಾಮಗಾರಿಗಳಿಗೆ ಬಿಡುಗಡೆಗೊಂಡಿರುವ ಎಸ್.ಎಫ್.ಸಿ ಅನುದಾನದಲ್ಲಿ, ಬೋಯಿಕೇರಿ ಬೆಟ್ಟಸಿರಿ ದೇವಸ್ಥಾನದಿಂದ ಬೋಯಿಕೇರಿ ಮುಖ್ಯ ರಸ್ತೆಯವರೆಗೆ ರೂ. ೧೫ ಲಕ್ಷ ಅನುದಾನದ ರಸ್ತೆ ಅಭಿವೃದ್ಧಿ ಕಾಮಗಾರಿ, ಬೋಯಿಕೇರಿ ಕೆದಮುಳ್ಳೂರು ರಸ್ತೆಯಲ್ಲಿ ಬಿ.ಎ ಸುಬ್ಬಯ್ಯ ಅವರ ಮನೆಯ ಮುಂದೆ ಸ್ಲಾö್ಯಬ್ ಅಳವಡಿಸುವ ಕಾಮಗಾರಿ ರೂ. ೨ ಲಕ್ಷ, ಹಾಗೂ ಬೋಯಿಕೇರಿಯ ಆಯ್ದ ಭಾಗಗಳಲ್ಲಿ ಬೀದಿ ದೀಪ ಅಳವಡಿಕೆ ಕಾಮಗಾರಿ, ಆಯ್ದ ಭಾಗಗಳಲ್ಲಿ ಚರಂಡಿ ನಿರ್ಮಾಣ ಕಾಮಾಗಾರಿಗಳಿಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು ವೀರಾಜಪೇಟೆ ಅಕ್ಕಪಕ್ಕದ ಗ್ರಾಮಗಳ ಕೆಲವು ಭಾಗಗಳು ಇದೀಗ ಪುರಸಭೆಗೆ ಸೇರ್ಪಡೆಗೊಂಡಿವೆ. ಈ ಭಾಗದ ಅಭಿವೃದ್ಧಿ ಕಾಮಗಾರಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರದಿಂದ ಅನುದಾನ ಒದಗಿಸಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಇದಕ್ಕೆ ಸ್ಥಳೀಯರ ಸಹಕಾರವು ಬೇಕು. ಮಳೆ ನಿಂತ ಕೂಡಲೇ ರಸ್ತೆ ಕಾಮಗಾರಿಗಳು ಪ್ರಾರಂಭವಾಗುತ್ತÀವೆ ಎಂದರು. ೫ನೇ ಪುಟಕ್ಕೆ

(ಮೊದಲ ಪುಟದಿಂದ) ಈ ಸಂದರ್ಭ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬಸ್ಸುಂ, ಪುರಸಭೆ ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ, ಅಭಿಯಂತರ ಹೇಮ್‌ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭೆ ಸದಸ್ಯರಾದ ಎಸ್.ಎಚ್. ಮತೀನ್, ಮಹಮ್ಮದ್ ರಾಫಿ ಸೇರಿದಂತೆ ಎಲ್ಲಾ ಸದಸ್ಯರುಗಳು, ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ, ಅಮ್ಮುಣಿಚಂಡ ರಾಜ ಸೇರಿದಂತೆ ಪಕ್ಷದ ಪ್ರಮುಖರು, ಬೋಯಿಕೇರಿಯ ಗ್ರಾಮಸ್ಥರು ಹಾಜರಿದ್ದರು.