ಕೂಡಿಗೆ, ಅ. ೨೭: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಂದಿನ ೫ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಒಟ್ಟು ೩೫ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ೧೫ಮಂದಿ ನಾಮಪತ್ರಗಳನ್ನು ಹಿಂಪಡೆದ ಹಿನ್ನೆಲೆಯಲ್ಲಿ ೨೦ ಮಂದಿ ಚುನಾವಣೆ ಕಣದಲ್ಲಿ ಉಳಿದಿದ್ದಾರೆ.

ಇನ್ನೂ ೮ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ತಾ. ೩೧ ರಂದು ನಡೆಯಬೇಕಾಗಿದ್ದು, ಸಂಟಿಕೊಪ್ಪ ವಿಭಾಗದ ೪ ನಿರ್ದೇಶಕ ಸ್ಥಾನಗಳಿಗೆ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಹಶೀಲ್ದಾರ್ ಕಿರಣ್ ಗೌರಯ್ಯ ಮಾಹಿತಿ ನೀಡಿದ್ದಾರೆ.