ಮಡಿಕೇರಿ, ಅ. ೨೮: ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯ ಸಂದರ್ಭ ಬೆಲ್ಲದ ಬಾಗೇವಾಡಿ ತಾಲೂಕಿನ ರಮೇಶ್ ಕತ್ತಿ ಎಂಬವರು ವಾಲ್ಮೀಕಿ ಸಮುದಾಯವನ್ನು ಆಕ್ಷೇಪಾರ್ಹ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ಧನ್, ಸೋಮವಾರಪೇಟೆ ತಾಲೂಕು ಸಂಚಾಲಕ ಎಂ.ಎಸ್. ವೀರೇಂದ್ರ ಹಾಗೂ ವೇದಿಕೆಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಡಾ. ಕಾವೇರಿ ಹೆಚ್.ಎಂ. ಅವರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರುಸಲ್ಲಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತಂದಿರುವ ರಮೇಶ್ ವಿರುದ್ಧ ಪರಿಶಿಷ್ಟ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.