ಗೋಣಿಕೊಪ್ಪ ವರದಿ, ಅ. ೨೮ : ಕಾಫಿ ಮಂಡಳಿ ವತಿಯಿಂದ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯಡಿಯಲ್ಲಿ ಕಾಫಿ ತೋಟಗಳಲ್ಲಿ ಹಾಗೂ ಕಾಫಿ ಕ್ಯೂರಿಂಗ್ಗಳಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ೨೦೨೫-೨೬ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಿಂದಿನ ವರ್ಷಗಳಲ್ಲಿ ತೇರ್ಗಡೆ ಹೊಂದಿ ೨೦೨೫-೨೬ನೇ ಸಾಲಿನಲ್ಲಿ ಪ್ರಥಮ ಪಿಯುಸಿ / ಪದವಿ/ತಾಂತ್ರಿಕ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಚೇರಿ ಸಮಯದಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅನುದಾನದ ಲಭ್ಯತೆಗನುಗುಣವಾಗಿ ಹಾಗೂ ಮೆರಿಟ್ ಆಧಾರದಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಸ್ವಂತ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳಾದ ಆಧಾರ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜಾತಿ ಪ್ರಮಾಣ ಪತ್ರ (ಎಸ್ಸಿ, ಎಸ್ಟಿ), ಹಿಂದಿನ ವರ್ಷ ತೇರ್ಗಡೆ ಹೊಂದಿದ ಅಂಕಪಟ್ಟಿ, ತೋಟದ ಮಾಲೀಕರ ದೃಢೀಕರಣ ಮತ್ತು ಪಹಣಿ,ಕಾಲೇಜಿನ ಪ್ರಾಂಶುಪಾಲರ ದೃಢೀಕರಣ ಪತ್ರ, ವಿದ್ಯಾರ್ಥಿಯ ಫೋಟೋ ನೀಡಬೇಕಿದೆ. ಅರ್ಜಿ ಸಲ್ಲಿಸಲು ನ. ೨೮ ಕೊನೆ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಗೋಣಿಕೊಪ್ಪ ಕಾಫಿ ಮಂಡಳಿ ಸಂಪರ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕಾಫಿ ಮಂಡಳಿ ಪ್ರಕಟಣೆ ತಿಳಿಸಿದೆ.