ಶನಿವಾರಸಂತೆ, ಅ. ೨೭: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಏಕದಂತ ಟ್ರಾö್ಯಕ್ಟರ್ ಒಕ್ಕೂಟದ ವತಿಯಿಂದ ಎರಡು ತಿಂಗಳ ಹಿಂದೆ ಪ್ರತಿಷ್ಠಾಪಿಸಲ್ಪಟ್ಟಿದ್ದ ಶ್ರೀ ಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವ ಶ್ರದ್ಧಾಭಕ್ತಿಯೊಂದಿಗೆ ಜರುಗಿತು.
ನಿತ್ಯವೂ ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದ ಅರ್ಚಕರಾದ ಸುಹಾಸ್ ಭಟ್ ಶ್ರೀ ಗಣಪತಿಗೆ ಪೂಜೆ ಸಲ್ಲಿಸಿದರು.ಮಹಾಮಂಗಳಾರತಿಯಾಗಿ ತೀರ್ಥ-ಪ್ರಸಾದ ವಿನಿಯೋಗವಾಯಿತು. ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ವಿವಿಧ ಬಗೆಯ ಹೂವುಗಳು ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾಗಿದ್ದ ಟ್ರಾö್ಯಕ್ಟರ್ನಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಭದ್ರಾವತಿಯ ಸುರಕ್ಷಾ ಡಿ.ಜೆ, ಉದ್ದೂರಿನ ಕರಗ ನೃತ್ಯದೊಂದಿಗೆ ಪಿರಿಯಾಪಟ್ಟಣದ ಲಕ್ಷಿö್ಮÃದೇವಿ ಲೈಟಿಂಗ್ಸ್ ಅಲಂಕಾರ ಜನಮನ ಸೆಳೆಯಿತು.
ನಂತರ ಮೆರವಣಿಗೆ ಕಾಜೂರು ರಸ್ತೆಯಲ್ಲಿ ಸಾಗಿ, ಕಾಜೂರು ಹೊಳೆಯಲ್ಲಿ ವಿಸರ್ಜಿಸಲಾಯಿತು. ಒಕ್ಕೂಟದ ಅಧ್ಯಕ್ಷ ಧನು, ಉಪಾಧ್ಯಕ್ಷ ಉಮೇಶ್ ಗುಂಡಾ, ವಿಜಯಕುಮಾರ್, ನಿರ್ದೇಶಕರು, ಸದಸ್ಯರು ಹಾಜರಿದ್ದರು. ಶನಿವಾರಸಂತೆ-ದುAಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರು ಪೂಜೆ ಹಾಗೂ ಮೆರವಣಿಗೆ ಸಂದರ್ಭ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಪೊಲೀಸ್ ಠಾಣೆ ವೃತ್ತನಿರೀಕ್ಷಕ ಜಿ. ಕೃಷ್ಣರಾಜ್ ಹಾಗೂ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
ಒಕ್ಕೂಟದ ಅಧ್ಯಕ್ಷ ಧನು ಮಾತನಾಡಿ, ಮುಂದಿನ ವರ್ಷದಿಂದ ಪ್ರತಿವರ್ಷ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಎರಡು ಜೋಡಿಗೆ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.