ಮಡಿಕೇರಿ, ಅ. ೨೮: ನಗರದ ಚೈನ್‌ಗೇಟ್ ಬಳಿ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ತಂಗುದಾಣವನ್ನು ತಾ. ೨೯ ರಂದು ಸಂಜೆ ೪ ಗಂಟೆಗೆ ಶಾಸಕ ಡಾ. ಮಂತರ್ ಗೌಡ ಉದ್ಘಾಟನೆ ಮಾಡಲಿದ್ದಾರೆ. ಲಯನ್ಸ್ ಜಿಲ್ಲಾ ಗವರ್ನರ್ ಅರವಿಂದ್ ಶೆಣೈ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಅಧ್ಯಕ್ಷೆ ಕಲಾವತಿ, ಸದಸ್ಯ ಕೆ.ಎಸ್. ರಮೇಶ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.