ಮಡಿಕೇರಿ, ಅ. ೨೮: ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆ ಮತ್ತು ಸುತ್ತಲಿನ ಉದ್ಯಾನವನದ ಅಭಿವೃದ್ಧಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಮ್ಮ ಶಾಸಕರ ನಿಧಿಯಿಂದ ರೂ. ೩ ಲಕ್ಷ ಅನುದಾನ ಒದಗಿಸಿದ್ದಾರೆ.

ಶಾಸಕರು ಮಡಿಕೇರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹಾಗೂ ಮಡಿಕೇರಿ ನಗರಸಭೆಯ ನಾಮನಿರ್ದೇಶನ ಸದಸ್ಯ ಮಂಡಿರ ಸದಾ ಮುದ್ದಪ್ಪ ಅವರು ಅಭಿವೃದ್ಧಿಗೆ ಗಮನಸೆಳೆದರು. ಸ್ಪಂದಿಸಿದ ಡಾ. ಮಂತರ್ ಗೌಡ ಅವರು ಅನುದಾನ ಘೋಷಣೆ ಮಾಡಿದ್ದಾರೆ.

ನಂತರ ಮಾತನಾಡಿದ ಡಾ. ಮಂತರ್ ಗೌಡ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದು, ಅವರ ಸಾಧನೆಗಳನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಈ ಮಹಾನ್ ನಾಯಕರಿಗೆ ಸಂಬAಧಿಸಿದ ಪ್ರತಿಯೊಂದು ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಸದಾ ಇರುತ್ತದೆ ಎಂದು ತಿಳಿಸಿದರು.

ಈ ಸಂದರ್ಭ ಮುಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.