ಸುಂಟಿಕೊಪ್ಪ, ಅ. ೨೮: ೩ನೇ ವಾರ್ಡಿನ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಹೊಸ ಅಂಗನವಾಡಿ ಕೇಂದ್ರ ಹಾಗೂ ನ್ಯಾಯಬೆಲೆ ಅಂಗಡಿ ಸಂಬAಧಿಸಿದAತೆ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ ಶುದ್ಧ ನೀರಿನ ಘಟಕವನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ಸುಂಟಿಕೊಪ್ಪ ೩ನೇ ವಾರ್ಡ್ ಸದಸ್ಯ ಎ. ಶಬೀರ್ ಹೇಳಿದರು.

ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ಸುಂಟಿಕೊಪ್ಪ ೩ನೇ ವಾರ್ಡ್ನ ವಾರ್ಡ್ ಸಭೆಯು ಖತೀಜ ಉಮ್ಮ ಮದರಸ ಆವರಣದಲ್ಲಿ ಶುಕ್ರವಾರ ಸಂಜೆ ನಡೆಯಿತು. ವಾರ್ಡ್ ಸದಸ್ಯರಾದ ಎ. ಶಬೀರ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಉಪಸ್ಥಿತರಿದ್ದ ೩ನೇ ವಿಭಾಗದ ನಿವಾಸಿಗಳು ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕೆಲವೊಂದು ಗಂಭೀರ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿ ಮಾತನಾಡಿದ ಸಭಾಧ್ಯಕ್ಷ ಎ. ಶಬೀರ್ ಅವರು, ಈ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕೇಂದ್ರ ಮತ್ತು ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಿಡಿಒ ವಿ.ಜಿ. ಲೋಕೇಶ್, ಸಿಬ್ಬಂದಿಗಳಾದ ಚಂದ್ರಕಲಾ, ಮಂಜುನಾಥ್, ರಂಗಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.