ವೀರಾಜಪೇಟೆ, ಅ. ೨೮: ವೀರಾಜಪೇಟೆಯ ಕರ್ನಾಟಕ ಸಂಘದ ವತಿಯಿಂದ ನವೆಂಬರ್ ೩ ರಂದು ೭೦ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕುಮಟ್ಟದ ಸ್ಪರ್ಧಾ ಕಾರ್ಯಕ್ರಮಗÀಳನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ತಿಳಿಸಿದ್ದಾರೆ.
ವೀರಾಜಪೇಟೆ ಪ್ರೆಸ್ಕ್ಲಬ್ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನವೆಂಬರ್ ೩ ರಂದು ಬೆಳಿಗ್ಗೆ ೧೦ ಗಂಟೆಗೆ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಪುರಸಭೆಯ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೋಪಯ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಉಪಸ್ಥಿತರಿರುತ್ತಾರೆ. ಇದೇ ಸಂದರ್ಭ ಕ್ರೀಡಾ ಕ್ಷೇತ್ರದಲ್ಲಿ ಚೆಪ್ಪುಡಿರ ಎಸ್. ಪೂಣಚ್ಚ, ಸೇನಾ ಕ್ಷೇತ್ರದಲ್ಲಿ ಚೇಂದ್ರಿಮಾಡ ನಂಜಪ್ಪ, ಶಿಕ್ಷಣ ಕ್ಷೇತ್ರದಲ್ಲಿ ದೇವಣಗೇರಿ ಬಿ.ಸಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಈರಮಂಡ ಹರಿಣಿ ಇವರನ್ನು ಸನ್ಮಾನಿಸಲಾಗುವುದು.
ನಂತರ ಸ್ವರ್ಧಾ ಕಾರ್ಯಕ್ರಮಗಳು ನಡೆಯಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಹಾಡಿಗೆ ನೃತ್ಯ (ಒಂದು ಶಾಲೆಯಿಂದ ೯ ವಿದ್ಯಾರ್ಥಿಗಳ ೧ ತಂಡಕ್ಕೆ ಅವಕಾಶ) ಕಾಲೇಜು ವಿಭಾಗಕ್ಕೆ ನಾಡಗೀತೆಗಳ ಸಮೂಹ ನೃತ್ಯ (ಒಂದು ಕಾಲೇಜಿನಿಂದ ೯ ವಿದ್ಯಾರ್ಥಿಗಳ ೧ ತಂಡಕ್ಕೆ ಅವಕಾಶ) ಮತ್ತು ಸಾರ್ವಜನಿಕರಿಗೆ ಜಾನಪದ ಗೀತೆ ಮತ್ತು ಕೊಡವ ಹಾಡು (ಒಬ್ಬರಿಗೆ ಒಂದು ಹಾಡು ಮಾತ್ರ) ಈ ಸ್ವರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಾ. ೩೧ರ ಸಂಜೆಯೊಳಗೆ ಹೆಸರು ನೋಂದಾಯಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮೊ: ೯೯೭೨೦೬೬೮೧೭ ಅಥವಾ ೯೩೫೩೧೭೩೭೦೪ನ್ನು ಸಂರ್ಪಕಿಸಬಹುದಾಗಿದೆ ಎಂದು ಬೆಲ್ಲು ಬೋಪಯ್ಯ ಹೇಳಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಚೇನಂಡ ಗಿರೀಶ್, ಕಾರ್ಯದರ್ಶಿ ಮುಂಡ್ಯೋಳAಡ ಕುಸುಮ ಸೋಮಣ್ಣ, ಖಜಾಂಚಿ ಕೋಟೆರ ಗಣೇಶ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.