ಸೋಮವಾರಪೇಟೆ, ಅ. ೨೮: ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯದ ಮೇಲ್ವಿಚಾರಕಿ ಎ.ಡಿ. ಪದ್ಮಾವತಿ ಅವರು ಜಾಗೃತಿ ಟ್ರಸ್ಟ್ ನೀಡುವ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಾವತಿ ಅವರಿಗೆ ಕಿತ್ತೂರು ರಾಣಿ ಚೆÀನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಾಗೃತಿ ಟ್ರಸ್ಟ್ನ ರಾಜ್ಯಾಧ್ಯಕ್ಷ ಬಿ. ನಾಗೇಶ್, ಜಿಲ್ಲಾಧ್ಯಕ್ಷ ಹೆಚ್.ಎಂ. ರಘು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗ್ರಂಥಾಲಯ ಕ್ಷೇತ್ರದಲ್ಲಿ ಕಳೆದ ೨೧ ವರ್ಷಗಳಿಂದ ತೊಡಗಿಸಿಕೊಂಡಿರುವ ಪದ್ಮಾವತಿ ಅವರು, ಕ್ರೀಡೆ, ಸಾಹಿತ್ಯ ಸೇವೆಯೊಂದಿಗೆ ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.