ವೀರಾಜಪೇಟೆ, ಅ. ೨೮: ಶ್ರೀ ರಾಮ ಭಕ್ತರ ಬಳಗ ವತಿಯಿಂದ ಎರಡನೇ ವರ್ಷದ ರಕ್ತದಾನ ಶಿಬಿರ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಶ್ರೀ ರಾಮ ಭಕ್ತರ ಬಳಗದ ಅಧ್ಯಕ್ಷ ಬಿ.ಎಂ.ಕುಮಾರ್ ಮಾತನಾಡಿ, ರಕ್ತದಾನ ಶ್ರೇಷ್ಠ ದಾನವಾಗಿದೆ. ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಮಾನವರಿಗೆ ಮಾನವರೆ ರಕ್ತದಾನ ಮಾಡಬೇಕು. ಹಲವಾರು ಮಂದಿ ಇಂದು ರಕ್ತದಾನ ಮಾಡಿ ಮಾದರಿಯಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಕೊರತೆ ಇದೆ. ಶಸ್ತçಚಿಕಿತ್ಸೆ ಸಮಯದಲ್ಲಿ ನಾವು ನೀಡುವ ರಕ್ತದಲ್ಲಿ ಅನೇಕರ ಪ್ರಾಣವನ್ನು ಉಳಿಸಬಹುದು ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಈ ಸಂದರ್ಭ ಬಳಗದ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಸದಸ್ಯರಾದ ವಿವೇಕ್ ರೈ, ದಿನೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.