ಮಡಿಕೇರಿ, ಅ. ೩೦: ಕೊಡಗು ಜಿಲ್ಲಾಡಳಿತದ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ. ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.