ವೀರಾಜಪೇಟೆ, ಅ. ೩೦: ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಢಶಾಲಾ ವಿಭಾಗದ ಪಂದ್ಯಾಟದಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್., ಶ್ರೀವತ್ಸ ಯು.ಜಿ. ಹಾಗೂ ತರುಣ್ ಎನ್.ಎಂ. ೭ನೇ ತರಗತಿಯ ವಿದ್ಯಾರ್ಥಿಗಳಾದ ಮಾಳೇಟ್ಟಿರ ಚಾಲ್ಸಿ, ಅಜಾನ್ ಎಂ.ಎ. ಅವರುಗಳು ಸ್ಪರ್ಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.