ನಾಪೋಕ್ಲು, ಅ. ೩೦: ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ಯುವ ಘಟಕದ ವತಿಯಿಂದ ನ. ೧ ಮತ್ತು ೨ ರಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-೨೦೨೫ ಕ್ರಿಕೆಟ್ ಸೀಸನ್-೧ ನಡೆಯಲಿದೆ.
ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಗೆ ನ. ೧ ರಂದು ಬೆಳಿಗ್ಗೆ ೯ ಗಂಟೆಗೆ ಚಾಲನೆ ದೊರೆಯಲಿದೆ. ವಿಜೇತ ತಂಡಕ್ಕೆ ೨೦,೦೦೦ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ೧೫,೦೦೦ ನಗದು ಮತ್ತು ಟ್ರೋಫಿ, ತೃತೀಯ ಬಹುಮಾನ ೫,೦೦೦ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ಹಲವಾರು ವೈಯಕ್ತಿಕ ಬಹುಮಾನವನ್ನು ನೀಡಲಾಗುವುದು.
ಪಂದ್ಯಾವಳಿಯು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಮುದಾಯದವರಿಗೆ ಮಾತ್ರ ಸೀಮಿತವಾಗಿದ್ದು, ೪ ಓವರ್ಗಳಿಗೆ ಸೀಮಿತವಾಗಿರುತ್ತದೆ ಎಂದು ಕೊಡಗು ಜಿಲ್ಲಾ ಕುಲಾಲ(ಕುಂಬಾರರ ಸಂಘದ ಯುವ ಘಟಕವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ೮೧೦೫೩೫೮೪೬೮, ೭೦೨೨೪೬೬೬೨೧, ೮೨೭೭೧೩೩೨೯೧ ಸಂಪರ್ಕಿಸಬಹುದಾಗಿದೆ.