ಸುಂಟಿಕೊಪ್ಪ, ಅ. ೩೦: ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಜಿಲ್ಲಾಮಟ್ಟದ ೧೪ರ ವಯೋಮಾನದವರಿಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಜಿಲ್ಲೆಯ ೫ ತಾಲೂಕುಗಳ ತಂಡಗಳು ಭಾಗವಹಿಸಿದ್ದವು. ಸಂತ ಮೇರಿ ಶಾಲೆಯ ತಂಡವು ಮಡಿಕೇರಿ ತಾಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಗೊಂಡಿದೆ.