ಮಡಿಕೇರಿ, ಅ. ೩೦: ಮಕ್ಕಳ ತಜ್ಞ ಮತ್ತು ಸಾಹಿತಿ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅವರು ನ್ಯೂಸ್ ೧೮ ಕನ್ನಡ ವಾಹಿನಿಯಿಂದ ನೀಡುವ ಹೆಲ್ತ್ಕೇರ್ ಹೀರೋ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಮ್ಮ ಹುಟ್ಟೂರಾದ ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೆ ಇದ್ದ ಸಂದರ್ಭದಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಪ್ರತಿ ತಿಂಗಳ ಒಂದು ಭಾನುವಾರ ಜನತಾ ಕ್ಲಿನಿಕ್ ಎಂಬ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರಿಂದ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅವರು ಈ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ವೈದ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.