ಮಡಿಕೇರಿ, ಅ. ೩೦: ಕರ್ನಾ ಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಹಾಗೂ ಉಪಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

೨ನೇ ಬಾರಿಗೆ ರಮೇಶ್ ಕುಟ್ಟಪ್ಪ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.