ನಾಪೋಕ್ಲು, ಅ. ೩೧: ಭಾಗಮಂಡಲದ ವಿಶ್ವ ಹಿಂದೂ ಪರಿಷತ್ ವತಿಯಿಂದ ತಾ. ೫ ರಂದು ಸಂಜೆ ೫ ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ.
ಆ ದಿನ ಭಜನ, ವೇದ ಘೋಷ ಹಾಗೂ ಕಾವೇರಮ್ಮನಿಗೆ ಆರತಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ವಿಭು ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷೆ ಡಾ. ಆರತಿ ವಿ.ಜಿ. ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರೀಯ ಸತ್ಸಂಗ ಪ್ರಮುಖ ಮಹಾಬಲೇಶ್ವರ ಹೆಗಡೆ ಉಪಸ್ಥಿತರಿರುವರು.