ಮಡಿಕೇರಿ, ಅ. ೩೧: ಮಡಿಕೇರಿಯ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ೫೦ನೇ ವರ್ಷದ ದಸರಾ ಉತ್ಸವ ಮೂರ್ತಿಗಳಿಗೆ ನ. ೧ ರಂದು (ಇಂದು) ಮಧ್ಯಾಹ್ನ ೩:೩೦ಕ್ಕೆ ದೇವಾಲಯದ ಆವರಣದಲ್ಲಿ ಶಾಂತಿ ಪೂಜೆ ನೆರವೇರಿಸಲಾಗುವುದು.

ಮಧ್ಯಾಹ್ನ ೩.೩೦ಕ್ಕೆ ಸಭಾ ಕಾರ್ಯಕ್ರಮ ಮಂಡಳಿ ಅಧ್ಯಕ್ಷ ಬಿ.ಕೆ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ಮುಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ದಶಮಂಟಪ ಸಮಿತಿ ಅಧ್ಯಕ್ಷ ಬಿ.ಎಂ. ಹರೀಶ್ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭ ಈ ಹಿಂದೆ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಗುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.