ಮಡಿಕೇರಿ, ಅ. ೩೧ : ಕೊಡಗು ಪತ್ರಿಕಾ ಭವನ ಟ್ರಸ್ಟಿನ ೨೪ನೇ ವಾರ್ಷಿಕೋತ್ಸವ ನ.೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ಭವನ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಪತ್ರಿಕೆಯ ಮೈಸೂರು ವಿಭಾಗದ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ ಪಾಲ್ಗೊಂಡು ಮುಖ್ಯ ಭಾಷಣ ಮಾಡಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಅವರು ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿತ ಒಳಾಂಗಣ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡವರಿಗೆ ಕಿರುಕಾಣಿಕೆಯನ್ನು ವಿತರಿಸಲಿದ್ದಾರೆಂದು ಪತ್ರಿಕಾ ಭವನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.