ಕುಶಾಲನಗರ, ಅ.೩೧: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ವೇದಿಕೆಗಳು ಅಡಿಪಾಯವಾಗಲಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ದಿಸೆಯಲ್ಲಿಯೇ ವೇದಿಕೆಯನ್ನು ಬಳಸಿಕೊಳ್ಳಬೇಕು. ತಮ್ಮ ಸಾಂಸ್ಕೃತಿಕ ಕಲಾ ವೈಭವವನ್ನು ಪ್ರದರ್ಶಿಸಬೇಕು. ಈ ವಿದ್ಯಾರ್ಥಿಗಳ ಜೊತೆಯಲ್ಲಿ ಉಪನ್ಯಾಸಕರು ಕೂಡ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಹುಣಸೂರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ರಾಷ್ಟಿçÃಯ ಶಿಕ್ಷಣ ಪ್ರಶಸ್ತಿ ಪುರÀಸ್ಕೃತ ಹೆಚ್.ಎನ್ ಗಿರೀಶ್ ಅವರು, ಅವಕಾಶಗಳನ್ನು ಬಳಸಿಕೊಳ್ಳಲು ಓದುವ ಸಮಯದಲ್ಲಿ ಗುರಿ ಇಟ್ಟುಕೊಳ್ಳಬೇಕು. ಯುವ ಜನಾಂಗ ತಮ್ಮ ಮನಸ್ಸನ್ನು ಗಾಳಿಗೆ ತೂರದೇ ಹತೋಟಿಯಲ್ಲಿಟ್ಟು ಕೊಂಡಾಗ ಮಾತ್ರ ತಮ್ಮ ಸಾಧನೆಯ ಗುರಿ ಮುಟ್ಟಲು ಸಾಧ್ಯವಿದೆ ಎಂದರು. ಕಾರ್ಯಕ್ರಮವನ್ಜು ಉದ್ಘಾಟಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಜೇಗೌಡ, ಯುವ ಜನಾಂಗ ಕೆದ್ದ ದಾರಿ ಹಿಡಿಯುತ್ತಿರುವುದು ಆತಂಕಕಾರಿ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ರಾಜಕೀಯ ಪ್ರೇರಿತ ವಿದ್ಯಾರ್ಥಿ ಸಂಘಟನೆಗಳಿAದ ದೂರವಿರಬೇಕೆಂದರು.
ಈ ವಿದ್ಯಾಸಂಸ್ಥೆ ರಾಜಕೀಯ ಮುಕ್ತವಾಗಿರಬೇಕು. ಹಾಗಾಗಿ ವಿದ್ಯಾರ್ಥಿ ಸಂಘಟನೆ ಎಂದು ಗುರುತಿಸಿಕೊಂಡಿರುವ ಎಬಿವಿಪಿ ಅಂತಹ ವಿದ್ಯಾರ್ಥಿ ಸಂಘಟನೆಗಳಲ್ಲಿ ವಿದ್ಯಾರ್ಥಿಗಳು ಹೋಗದಂತೆ ಹಾಗೂ ಸಂಘಟನೆಯ ಬಾವುಟ ಹಿಡಿದು ಪ್ರತಿಭಟನೆ ಮಾಡದಂತೆ ಸಂಸ್ಥೆಯ ಮುಖ್ಯಸ್ಥರು ನಿಗಾ ವಹಿಸಬೇಕಾಗಿದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪುಟ್ಟರಾಜು ವಹಿಸಿದ್ದರು. ಕಾಲೇಜಿನಲ್ಲಿ ನೂತನವಾಗಿ ಆರಂಭಿಸಲಾದ ಡಿಜಿಟಲ್ ಲೈಬ್ರರಿಗೆ ಶಾಸಕರು ಚಾಲನೆ ನೀಡಿದರು. ಇದೇ ವೇಳೆ ಪಠ್ಯೇತರ ಚಟುವಟಿಕೆಗಳ ಸಮಿತಿಗೆ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಉಪನ್ಯಾಸಕ ಸಿದ್ದರಾಮೇ ಗೌಡ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೃಷ್ಣ, ಐಕ್ಯೂಎಸಿ ಸಂಚಾಲಕಿ ಮಧುಶ್ರೀ, ಸಹ ಸಂಚಾಲಕಿ ಕೆ.ಪಿ.ಕುಸುಮ, ಸಾಂಸ್ಕೃತಿಕ ಸಮಿತಿ ಸಂಚಾಲಕ ಎಸ್. ಸುನಿಲ್ ಕುಮಾರ್, ಎನ್.ಎಸ್.ಎಸ್.ಅಧಿಕಾರಿ ಬಿ.ಕೆ.ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕಿ ಪಿ.ಪಿ.ಜಯಂತಿ, ವಾರ್ಷಿಕ ಸಂಚಿಕೆ ಸಂಚಾಲಕಿ ರಶ್ಮಿ, ಆಯಿಶಾ ಸಿದ್ದಿಖಿ, ನಮಿತ, ಸೂರ್ಯಕುಮಾರ್, ಮನೋಜ್ ಕುಮಾರ್, ಮಹಾದೇವ, ರಾಜೇಶ್, ಗಿರೀಶ್, ಸಚಿನ್, ಅಧೀಕ್ಷಕ ಮೋಹನ್ ಕುಮಾರ್ ಸೇರಿದಂತೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು.