ಶನಿವಾರಸAತೆ, ನ. ೫: ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಆಶ್ರಯದಲ್ಲಿ ೧೪-೧೭ನೇ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾರತಿ ವಿದ್ಯಾಸಂಸ್ಥೆ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ ೧೭ನೇ ವಯೋಮಿತಿ ವಿದ್ಯಾರ್ಥಿ ವಿಭಾಗದಲ್ಲಿ ವೀರಾಜಪೇಟೆ ತಾಲೂಕು ಅಮ್ಮತ್ತಿ ನೇತಾಜಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನಗಳಿಸಿದೆ.

ಕುಶಾಲನಗರ ತಾಲೂಕು ಫಾತಿಮಾ ಶಾಲಾ ತಂಡ ದ್ವಿತೀಯ ಸ್ಥಾನಗಳಿಸಿದೆ. ೧೭ರ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ವೀರಾಜಪೇಟೆ ತಾಲೂಕಿನ ಲಯನ್ಸ್ ವಿದ್ಯಾಸಂಸ್ಥೆ ಬಾಲಕಿಯರ ತಂಡ ಪ್ರಥಮ ಹಾಗೂ ಮಡಿಕೇರಿ ತಾಲೂಕು ಸರ್ಕಾರಿ ಪಿ.ಯು. ಕಾಲೇಜು ಪ್ರೌಢಶಾಲಾ ತಂಡ ದ್ವಿತೀಯ, ೧೪ರ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ಪೊನ್ನಂಪೇಟೆ ಅಪ್ಪಚ್ಚ ಕವಿ ಪ್ರಾಥಮಿಕ ಶಾಲಾ ತಂಡ ಪ್ರಥಮ,

ಮಡಿಕೇರಿ ತಾಲೂಕು ಜಿ.ಎಂ.ಪಿ. ಶಾಲಾ ತಂಡ ದ್ವಿತೀಯ, ೧೪ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ವೀರಾಜಪೇಟೆ ಬಾರ್ಕಸ್ ಪ್ರಾಥಮಿಕ ಶಾಲಾ ತಂಡ ಹಾಗೂ ಸೆಕ್ರೇಟ್ ಹಾರ್ಟ್ ಪ್ರಾಥಮಿಕ ಶಾಲಾ ತಂಡ ದ್ವಿತೀಯ ಸ್ಥಾನಗಳಿಸಿತು.

ಭಾರತಿ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಫುಟ್ಬಾಲ್ ಕ್ರೀಡಾಕೂಟವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಉದ್ಘಾಟಿಸಿದರು.

ಈ ಸಂದರ್ಭ ಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಪ್ಪಸ್ವಾಮಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಮಹಮದ್ ಖಾನ್, ರಂಗಸ್ವಾಮಿ, ಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವಯ್ಯ ಎಸ್. ಪಲ್ಲೇದ್, ಪಿ.ಯು. ಕಾಲೇಜು ಪ್ರಾಂಶುಪಾಲ ಅಶೋಕ್, ಮೂರು ತಾಲೂಕಿನ ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರು ಹಾಗೂ ಕ್ರೀಡಾಕೂಟ ಸಂಯೋಜಕ ಎಚ್.ವೈ. ಆದರ್ಶ್, ರಾಜೇಶ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಫುಟ್ಬಾಲ್ ತರಬೇತುದಾರರು ಪಾಲ್ಗೊಂಡಿದ್ದರು.

ಪಂದ್ಯಾವಳಿಯಲ್ಲಿ ಮೂರು ತಾಲೂಕಿನ ೧೨ ತಂಡಗಳು ಭಾಗವಹಿಸಿದ್ದವು.