ಸೋಮವಾರಪೇಟೆ, ನ. ೫: ಕೊಡಗಿನ ರೈತರಿಗೆ ಹೆಚ್ಚು ಆತಂಕ ಸೃಷ್ಟಿಸಿರುವ ಸಿ ಮತ್ತು ಡಿ ವರ್ಗದ ಜಮೀನುಗಳ ಸಮಸ್ಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರ ಮೂಲಕ ಕೊಡಗಿನ ಜನಪ್ರತಿನಿಧಿಗಳ ನಿಯೋಗ, ರಾಜ್ಯ ಸರ್ಕಾರದ ಕಂದಾಯ ಇಲಾಖಾ ಸಚಿವ ಕೃಷ್ಣಭೈರೇಗೌಡ ಅವರೊಂದಿಗೆ ಚರ್ಚಿಸಿತು.

ಸಿ ಮತ್ತು ಡಿ ವರ್ಗದ ಜಮೀನುಗಳಲ್ಲಿ ರೈತರು ಕೃಷಿ ಮಾಡಿಕೊಂಡಿದ್ದು, ಇದೀಗ ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ, ಸೆಕ್ಷನ್-೪ ನೋಟಿಫಿಕೇಷನ್ ಸಂಬAಧ ನೋಟೀಸ್ ನೀಡುತ್ತಿರುವು ದರಿಂದ ಸಮಸ್ಯೆಯಾಗಿದ್ದು, ಈ ಬಗ್ಗೆ ರೈತರು ಹೋರಾಟ ಆರಂಭಿಸಿರುವ ಬಗ್ಗೆ ಶಾಸಕರುಗಳಾದ ಡಾ. ಮಂತರ್ ಗೌಡ ಹಾಗೂ ಎ.ಎಸ್. ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳು, ಉಸ್ತುವಾರಿ ಸಚಿವ ಬೋಸರಾಜು ಅವರ ಮೂಲಕ ಕಂದಾಯ ಸಚಿವರ ಗಮನಕ್ಕೆ ತಂದರು. ಸಿ ಮತ್ತು ಡಿ ಜಾಗದ ಸಮಸ್ಯೆ ಬಗ್ಗೆ ರೈತರು (ಮೊದಲ ಪುಟದಿಂದ) ನಡೆಸುತ್ತಿರುವ ಹೋರಾಟದ ಕುರಿತು ಸಂಪೂರ್ಣ ಮಾಹಿತಿ ನೀಡಿದ ನಿಯೋಗ, ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸವಿಸ್ತಾರವಾಗಿ ವಿವರಿಸಿತು. ವಿದ್ಯಮಾನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಸಚಿವರು, ಯಾರಿಗೂ ತೊಂದರೆಯಾಗದAತೆ, ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಅದರ ಮೂಲಕ ಸಮಗ್ರ ವರದಿ ತಯಾರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ರೈತರು ಆತಂಕಪಡುವ ಅನಿವಾರ್ಯತೆ ಇಲ್ಲ ಎಂದು ಭರವಸೆ ನೀಡಿದರು.