*ಗೋಣಿಕೊಪ್ಪ, ನ. ೬: ಭಾರತವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುವಲ್ಲಿನ ಮೋದಿ ಸರ್ಕಾರದ ನಡೆ ಜನಪರವಾಗಿದೆ ಎಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಸಮುದಾಯ ಭವನದಲ್ಲಿ ನಡೆದ ತಿತಿಮತಿ ಮತ್ತು ದೇವರಪುರ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಪಂಚದಾದ್ಯAತ ಭಾರತ ತನ್ನ ನಿಲುವು ಮತ್ತು ಅಭಿವೃದ್ಧಿಯಿಂದಾಗಿ ಗಮನ ಸೆಳೆಯುತ್ತಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮೂಲ ಸೌಕರ್ಯಗಳು ಸಿಗಬೇಕು ಎಂಬ ಉದ್ದೇಶದಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ದೇಶದ ಅತಿ ಸಣ್ಣ ಗ್ರಾಮಗಳನ್ನು ಸಹ ಕೇಂದ್ರ ಸರ್ಕಾರ ಗುರುತಿಸುತ್ತಿದ್ದ ಪ್ರಧಾನ ಮಂತ್ರಿ ಮೋದಿಯವರು ಮನ್ ಕೀ ಬಾತ್ ಮೂಲಕ ಗ್ರಾಮೀಣ ಭಾಗದ ವಿಚಾರಗಳನ್ನು ಎತ್ತಿ ಹಿಡಿಯುತ್ತಿದ್ದಾರೆ. ಪ್ರತಿಯೊಬ್ಬರು ಇದನ್ನು ಆಲಿಸಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೆ ಸಂದರ್ಭ ಸಾರ್ವಜನಿಕರ ಅವಾಲುಗಳನ್ನು ಸ್ವೀಕರಿಸಿದ ಸಂಸದರು ಕೇಂದ್ರ ಸರ್ಕಾರದ ಅನುದಾನದಲ್ಲಿ ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು, ಕ್ರಿಯಾ ಯೋಜನೆ ರೂಪಿಸಿಕೊಂಡು ಅನುದಾನದ ಸಮರ್ಪಕ ಬಳಕೆಗೆ ಹೆಜ್ಜೆ ಇಡಲಾಗಿದೆ ಎಂದು ತಿಳಿಸಿದರು.
ತಿತಿಮತಿ ಗ್ರಾಮದಲ್ಲಿ ಎದುರಾಗಿರುವ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಜಲಜೀವನ್ ಮಿಷನ್ ಉದ್ದೇಶಿತ ಕಾಮಗಾರಿ ಗುರಿ ಪೂರೈಕೆಯಾಗದ ವಿರುದ್ಧ ಸ್ಥಳೀಯರು ನೀಡಿದ ದೂರನ್ನು ಪರಿಗಣಿಸಿ ಕ್ರಮದ ಭರವಸೆ ನೀಡಿದರು.
ಇದೇ ಸಂದರ್ಭ ತಿತಿಮತಿ ಮತ್ತು ದೇವರಪುರ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಸಂಸದರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೀರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ನೆಲ್ಲೀರ ಚಲನ್, ವಿರಾಜಪೇಟೆ ಮಂಡಲ ಪ್ರ.ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮನ್ಕೀ ಬಾತ್ ಪ್ರಮುಖ್ ಅನೂಪ್ ಕುಮಾರ್, ತಿತಿಮತಿ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪಿ, ದೇವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಮಂಜು, ತಿತಿಮತಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೆಪುö್ಪಡೀರ ರಾಮಕೃಷ್ಣ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ತಿತಿಮತಿ ಮತ್ತು ದೇವರಪುರ ಬಿಜೆಪಿ ಕಾರ್ಯಕರ್ತರು ಇದ್ದರು.