ಮಡಿಕೇರಿ, ನ. ೬: ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ೬ ಬ್ಲಾಕ್ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.
ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ವಿ.ಜಿ. ಮೋಹನ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ವಿ.ಎ.ಲಾರೆನ್ಸ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಎ.ಕೆ. ಹಕೀಂ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಆಪಟ್ಟೀರ ಟಾಟು ಮೊಣ್ಣಪ್ಪ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಮತೀನ್ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಪೆರುಮುಂಡ ಮನು ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯ ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳ ಶಿಫಾರಸ್ಸಿನಂತೆ ಮಾಜಿ ಸಚಿವ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಇವರುಗಳನ್ನು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
೬ ಬ್ಲಾಕ್ ಅಧ್ಯಕ್ಷರೊಂದಿಗೆ ತಲಾ ೨೨ ಪದಾಧಿಕಾರಿ ಹಾಗೂ ಸದಸ್ಯರನ್ನು ಕೂಡ ನೇಮಕ ಮಾಡಿ ಅನುಮೋದನೆಗಾಗಿ ಕೆಪಿಸಿಸಿ ಪ್ರಚಾರ ಸಮಿತಿಗೆ ಕಳುಹಿಸಲಾಗಿದೆ ಎಂದು ಟಿ.ಪಿ. ರಮೇಶ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.