ವೀರಾಜಪೇಟೆ, ನ. ೬ : ಕೊಡಗಿನಲ್ಲಿ ಕೊಡವರು ತಮ್ಮ ಸಂಸ್ಕೃತಿ ಮತ್ತು ಪಾರಂಪರಿಕತೆಯನ್ನು ಇಂದಿಗೂ ಕಾಪಾಡಿಕೊಂಡು ಬರುತ್ತಿರುವುದು ಸಂತಸ ಹಾಗೂ ಅಭಿನಂದನಾರ್ಹ ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬಾಳುಗೋಡುವಿನಲ್ಲಿ ಕೊಡವ ಸಮಾಜ ಒಕ್ಕೂಟದ ವತಿಯಿಂದ ಪ್ರತಿವರ್ಷ ನಡೆಸುವ ಕೊಡವ ನಮ್ಮೆಯಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡಿ ಸಂಸ್ಕೃತಿ, ಏಕತೆ, ಒಗ್ಗಟ್ಟುಗಳನ್ನು ಸೃಷ್ಟಿಸುವಲ್ಲಿ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ. ಏಕತೆ ಮತ್ತು ಒಗ್ಗಟ್ಟಿನಿಂದ ಎಲ್ಲರೂ ಒಗ್ಗೂಡಿ ದೇಶದ ಪ್ರಗತಿಗೆ ಸಹಕರಿಸಬೇಕು.

ಕೊಡಗಿನಲ್ಲಿ ದೂರಸಂಪರ್ಕ ವ್ಯವಸ್ಥೆ ಸುಧಾರಣೆ ಅಗತ್ಯವಿದ್ದು, ಬಿ.ಎಸ್. ಎನ್.ಎಲ್ ವ್ಯವಸ್ಥೆ ಸರಿಪಡಿಸಿ ಸಮಸ್ಯೆಗಳನ್ನು ಬಗೆಹರಿಸಿ ದೂರ ಸಂಪರ್ಕ ವ್ಯವಸ್ಥೆ ಸರಿಪಡಿಸಲು ಹಾಗೂ ಬಿ.ಎಸ್. ಎನ್.ಎಲ್ ನಲ್ಲಿ ೫ ಜಿ ಅಳವಡಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಕೆಲವು ಕಡೆ ನೂತನ ಟವರ್ ಅಳವಡಿಕೆಗೆ ಭೂ ಸ್ವಾಧೀನ ಪ್ರಗತಿಯಲ್ಲಿದೆ. ಕೊಡಗಿನಲ್ಲಿ ಪ್ರಕೃತಿ ಆಡಚಣೆಯೂ ಪ್ರಮುಖ ಕಾರಣವಾಗುತ್ತಿದೆ. ಉಪಗ್ರಹ ಆಧಾರಿತ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಭವಿಷ್ಯದಲ್ಲಿ ತಂತ್ರಜ್ಞರು ಕ್ರಮ ಕೈಗೊಳ್ಳಬೇಕು. ಶ್ರೀರಂಗಪಟ್ಟಣ ಕುಶಾಲನಗರ ಹೆದ್ದಾರಿ ಅಭಿವೃದ್ಧಿಗೆ ಕೆಲವು ಕಡೆ ಅರಣ್ಯ ಇಲಾಖೆ ಅಡ್ಡಿ ಇದ್ದು ಶೀಘ್ರದಲ್ಲಿ ೪ಐದÀನೇ ಪುಟಕ್ಕೆ (ಮೊದಲ ಪುಟದಿಂದ) ಅನುಮತಿ ದೊರೆಯಲಿದೆÂ. ಹೆದ್ದಾರಿ ಕಾಮಗಾರಿ ಶೀಘ್ರ ನಡೆಯುವ ಭರವಸೆ ಇದೆ ಎಂದು ಯದುವೀರ್ ಹೇಳಿದರು.

ಕೊಡವ ನಮ್ಮೆಯ ಪ್ರಯುಕ್ತ ಕೊಡವ ಸಮಾಜಗಳ ನಡುವಿನ ಹಾಕಿ ಪಂದ್ಯಾಟದಲ್ಲಿ ವಿರಾಜಪೇಟೆ ಹುದಿಕೇರಿ ಕೊಡವ ಸಮಾಜಗಳ ನಡುವಿನ ಪಂದ್ಯಾಟಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಚಾಲನೆ ನೀಡಿ ಶುಭ ಕೋರಿದರು.

ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಕಾರ್ಯದರ್ಶಿ ವಾಟೇರಿರ ಪೂವಯ್ಯ, ಕೊಡವ ಸಮಾಜ ಒಕ್ಕೂಟದ ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಯಪ್ಪ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉಪಾಧ್ಯಕ್ಷ ಕಾಣತಂಡ ಜಗದೀಶ್ ಕೊಡಗು ಹಾಕಿ ಸಂಸ್ಥೆಯ ಅಧ್ಯಕ್ಷ ಪಳಂಗAಡ ಲವಕುಮಾರ್, ಒಲಂಪಿಯನ್ ಚೆಪ್ಪುಡಿರ ಪೂಣಚ್ಚ, ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಕೊಡವ ಸಮಾಜ ಒಕ್ಕೂಟದ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಲ್ಲಣಮಾಡ ರೀಟಾ ಸೇರಿದಂತೆ ವಿವಿಧ ಕೊಡವ ಸಮಾಜದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.