ನಾಪೋಕ್ಲು, ನ. ೬: ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಕೊಡಗಿನ ಅಪ್ಪಚೆಟ್ಟೋಳಂಡ ಅಯ್ಯಪ್ಪ ಆಯ್ಕೆಯಾಗಿದ್ದಾರೆ.
ಶ್ರೀಲಂಕಾದ ಕೊಲಂಬಿಯಾ ಸ್ಟೇಡಿಯಂನಲ್ಲಿ ತಾ. ೮ ರಿಂದ ೨೯ ರವರೆಗೆ ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿ ನಡೆಯಲಿದ್ದು, ತೀರ್ಪುಗಾರರಾಗಿ ಹಾಕಿ ಕೂರ್ಗ್ ಹಾಗೂ ಹಾಕಿ ಇಂಡಿಯಾದ ತೀರ್ಪುಗಾರ ಅಪ್ಪಚೆಟ್ಟೋಳಂಡ ಅಯ್ಯಪ್ಪ ಕಾರ್ಯ ನಿರ್ವಹಿಸಲಿದ್ದಾರೆ.
ಇವರು ಮಡಿಕೇರಿ ತಾಲೂಕಿನ ನಾಪೋಕ್ಲುವಿನ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ - ಬೋಜಮ್ಮ ದಂಪತಿ ಪುತ್ರ.