ಮಡಿಕೇರಿ, ನ. ೯: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾಗೃತಿ ಕಾರ್ಯಕ್ರಮ ನಗರದ ಖಾಸಗಿ ಹೊಟೇಲ್‌ನಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಿತು.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ, ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಇದೊಂದು ಅತ್ಯುತ್ತಮ ಯೋಜನೆಯಾಗಿದೆ. ಬೇರೆ ಬೇರೆ ರೀತಿಯ ಉದ್ಯೋಗಗಳನ್ನು ಕಲಿಯಲು ಹಾಗೂ ಉತ್ತೇಜನ ನೀಡಲು ಸರ್ಕಾರದ ವತಿಯಿಂದ ಸಾಲ ಸೌಲಭ್ಯಗಳನ್ನು ನೀಡಿ ಸಹಾಯವನ್ನು ಮಾಡುವ ಒಂದು ಒಳ್ಳೆಯ ಯೋಜನೆ ಸರ್ಕಾರವು ತಂದಿದೆ.
ಈ ಯೋಜನೆಯ ಉಪಯೋಗವನ್ನು ಎಲ್ಲರು ಪಡೆದುಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ರೂಪ ಮಾತನಾಡಿ, ಉದ್ಯಮಿ ಹಾಗೂ ಉದ್ಯೋಗ ನೀಡು ಎಂಬುದು ನಮ್ಮ ಪರಿಕಲ್ಪನೆಯಾಗಿದೆ. ಈಗಾಗಲೇ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ೧,೪೨೫ ಫಲಾನುಭವಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಆದರೆ ಹಾಜರಿರುವವರ ಸಂಖ್ಯೆ ಕಡಿಮೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಹನುಮಂತರಾಯ ಮಾತನಾಡಿ, ಈ ಯೋಜನೆಯಡಿ ಉತ್ತಮ ತರಬೇತಿಯನ್ನು ನೀಡಿ ಸುಧಾರಿತ ಉಪಕರಣಗಳನ್ನು ಒದಗಿಸಿ ಉತ್ತೇಜನ ನೀಡಲಾಗುವುದು. ಎಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು.ಪ್ರದಾನಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮದ ಎಲ್.ಡಿ.ಎಂ. ಗಂಗಾಧರಯ್ಯ, ಡಿಎಫ್.ಓ. ಸುಂದರ್ ಶರಿಗರ್ ಮತ್ತಿತರರು ಇದ್ದರು.