ಮಡಿಕೇರಿ, ನ. ೯ : ಹಾಕಿ ಅಕಾಡೆಮಿಯ ನೂತನ ಅಧ್ಯಕ್ಷರು, ಪದಾಧಿಕಾರಿಗಳು ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ನೂತನ ಆಡಳಿತ ಮಂಡಳಿಗೆ ಶಾಸಕರು ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಅಧ್ಯಕ್ಷ ಪಾಂಡAಡ ಬೋಪಣ್ಣ, ಕಾರ್ಯಾಧ್ಯಕ್ಷÀ ಒಲಂಪಿಯನ್ ಚೆಪ್ಪುಡಿರ ಪೂಣಚ್ಚ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.