ಮಡಿಕೇರಿ, ನ. ೯: ಗೋಣಿಕೊಪ್ಪ ಲಯನ್ಸ್ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕೊಡಗು ಕನ್ನಡ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕನ್ನಡದ ಮಹತ್ವದ ಬಗ್ಗೆ ಮಾತನಾಡಿ, ಮಕ್ಕಳು ದಿನನಿತ್ಯದ ಜೀವನದಲ್ಲಿ ಕನ್ನಡವನ್ನು ಬಳಸುವಂತೆ ಕರೆ ನೀಡಿದರು.
ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಹಾಗೂ ಪ್ರೌಢ ವಿಭಾಗದ ಮಕ್ಕಳಿಂದ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಈ ಸಂದರ್ಭ ಕ್ಲಬ್ ಅಧ್ಯಕ್ಷ ಸಿ.ಪಿ. ಬೋಪಣ್ಣ, ಕಾರ್ಯದರ್ಶಿ ಎಂ.ಬಿ. ಸೌಮ್ಯ, ಖಜಾಂಚಿ ಸೋಮಣ್ಣ ಐ.ಎಂ, ಟ್ರಸ್ಟ್ ಅಧ್ಯಕ್ಷ ಪಟ್ಟದ ಧನು ಉತ್ತಯ್ಯ, ಪ್ರಾಂಶುಪಾಲೆ ಲತಾ ಬೋಪಣ್ಣ, ಮುಖ್ಯ ಶಿಕ್ಷಕಿಯರಾದ ಘಾನಾ ಸಿ.ಎಸ್. ಹಾಗೂ ತಾಜ್ ತಂಗಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ಕ್ಲಬ್ ಹಾಗೂ ಟ್ರಸ್ಟ್ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವಿದ್ಯಾರ್ಥಿ ಪ್ರಜ್ವಲ್ ಸ್ವಾಗತಿಸಿದರೆ, ವಿದ್ಯಾರ್ಥಿನಿ ತಾನ್ಯ ದೇಚಮ್ಮ ನಿರೂಪಿಸಿ, ಡೆರಿನ್ ಬ್ರಾನ್ ಸೈಮನ್ ವಂದಿಸಿದರು.