ಚೆಯ್ಯಂಡಾಣೆ, ನ. ೯: ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೩ ದಿನಗಳ ಕಾಲ ನಡೆಯುತ್ತಿರುವ ಕೊಕೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವುದು ಅತ್ಯವಶ್ಯಕ ಹಾಗೂ ಆರೋಗ್ಯಕರವಾಗಿದೆ. ಗ್ರಾಮೀಣ ಭಾಗದಲ್ಲಿ ಆಯೋಜಿಸುವಂತಹ ಕ್ರೀಡಾಕೂಟದಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಅವಕಾಶ ಸಿಗುವಂತಾಗುತ್ತದೆ. ಇಂತಹ ಕ್ರೀಡಾಕೂಟ ಇದೇ ರೀತಿ ಮುಂದುವರೆಯಲಿ ಇದಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ, ಉಪಾಧ್ಯಕ್ಷ ವಿನೋದ್ ನಾಣಯ್ಯ,ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಬೊಳ್ಳಂಡ ಶರೀನ್, ಗ್ರಾಮ ಪಂಚಾಯಿತಿ ಸದಸ್ಯರು, ಕೆಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷ ಚೇನಂಡ ರೋಷನ್ ಚಂಗಪ್ಪ, ಉಪಾಧ್ಯಕ್ಷ ಪೆಮ್ಮಂಡ ದಕ್ಷತ್ ಸುಬ್ಬಯ್ಯ, ಕೋಶಾಧಿಕಾರಿ ಚೇನಂಡ ವಿಪಿನ್ ಗಣಪತಿ,
ಪೊನ್ನಚಂಡ ಕಾಳಪ್ಪ, ಕೆಪಿಎಲ್ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.