ಐಗೂರು : ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಕಾಲೋನಿಯ ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆಗಳನ್ನು ವಿತರಿಸಲಾಯಿತು . ಬಟ್ಟೆಗಳನ್ನು ಉಚಿತವಾಗಿ ಹರದೂರು ಗ್ರಾಮ ಪಂಚಾಯಿತಿಯ ಸದಸ್ಯ ಸಲೀಂ ಹೊಸತೋಟ ವಿತರಿಸಿದರು.

ಮಡಿಕೇರಿ: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟು ಹಬ್ಬವನ್ನು ಮಡಿಕೇರಿಯ ವಿಕಾಸ ಜನಸೇವಾ ಟ್ರಸ್ಟ್ ನಲ್ಲಿ, ಕೇಕ್ ಕತ್ತರಿಸಿ, ವಯೋ ವೃದ್ಧರಿಗೆ ಮಧ್ಯಾಹ್ನದ ಊಟವನ್ನು ನೀಡುವುದರ ಮೂಲಕ ಆಚರಿಸಲಾಯಿತು.ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣಿರ, ರಾಹುಲ್ ಮಾರ್ಷಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಕೀಮ್ ರವರ ನೇತೃತ್ವದಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು.

ಈ ಸಂದರ್ಭ ಜಿಲ್ಲಾ ಯುವ ಮುಖಂಡ ಅನ್ಫಾಲ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಮಿರ್ಷಾದ್ ಪರವಂಡ ಮೀನಾಜ್ , ಅಹ್ಮದ್ ಜಕ್ರಿಯ ಸರ್ದಾರ್ ಹಾಜರಿದ್ದರು.ಕುಶಾಲನಗರ: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟುಹಬ್ಬ ಆಚರಣೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು, ಪ್ರಮುಖರು, ಕಾರ್ಯಕರ್ತರು ಕೇಕ್ ಕತ್ತರಿಸಿ ಹೂವಿನ ಹಾರಗಳನ್ನು ಹಾಕಿ ಹುಟ್ಟುಹಬ್ಬದ ಶುಭ ಕೋರಿದರು.ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿದ ಸಮಿತಿಯ ಪ್ರಮುಖರು ಕೇಕ್ ಕತ್ತರಿಸಿ ಸಿಹಿ ಹಂಚಿ, ಊಟದ ವ್ಯವಸ್ಥೆಯನ್ನು ಕಲ್ಪಿಸಿ ಸಂಭ್ರಮಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯ ಹಾಗೂ ಸಮಾಜ ಸೇವಕ ಡಾ.ಹೆಚ್.ವಿ.ದೇವದಾಸ್ ಅವರು, ದಲಿತ ಸಂಘರ್ಷ ಸಮಿತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಹಳ ವರ್ಷಗಳಿಂದ ತಾವು ವೃದ್ಧಾಶ್ರಮದ ನಿವಾಸಿಗಳೊಂದಿಗೆ ಒಡನಾಟ ಹೊಂದಿದ್ದು, ಮುಂದಿನ ದಿನಗಳಲ್ಲಿಯೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಕೊಡಗಿನಲ್ಲಿ ಕಳೆದ ೨೦ ವರ್ಷಗಳಿಂದ ಕಾಣದಿರುವ ಅಭಿವೃದ್ಧಿ ಕಾರ್ಯಗಳು ಶಾಸಕದ್ವಯರಿಂದ ನಡೆಯುತ್ತಿದೆ. ಎಲ್ಲಾ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿರುವ ಇಬ್ಬರು ಶಾಸಕರ ಗೆಲುವಿಗಾಗಿ ದಲಿತ ಸಂಘರ್ಷ ಸಮಿತಿ ಅವಿರತ ಪ್ರಯತ್ನ ನಡೆಸಿತ್ತು. ಇಂದು ಅವರ ಗೆಲುವು ಸಾರ್ಥಕತೆ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕಿ ಪ್ರೇಮಾ ಕೃಷ್ಣಪ್ಪ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿಕ್ಷಣ, ಸಂಘಟನೆ, ಹೋರಾಟದ ಧ್ಯೇಯವನ್ನಿಟ್ಟುಕೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಉತ್ತಮ ಕಾರ್ಯಗಳನ್ನು ಮಾಡುತ್ತ ಬಂದಿದೆ. ವಯೋವೃದ್ಧರ ಬಗ್ಗೆ ಕಾಳಜಿಯನ್ನೂ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಿತಿಯ ಸದಸ್ಯೆ ಮಾಲತಿ ಹಾಗೂ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೃದ್ಧಾಶ್ರಮದ ವ್ಯವಸ್ಥಾಪಕÀ ಹೆಚ್.ಆರ್.ಸತೀಶ್ ಅವರು ಸ್ವಾಗತಿಸಿ, ವಂದಿಸಿದರು.