ಮಡಿಕೇರಿ, ನ. ೯: ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೨ ರಂದು ಬೆಳಗ್ಗೆ ೧೧ ರಿಂದ ೧ ಗಂಟೆಯವರೆಗೆ ಮಡಿಕೇರಿ ತಾಲೂಕು ಕಚೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ನಗರದ ಗೌಳಿಬೀದಿ ಮಡಿಕೇರಿಯಲ್ಲಿರುವ ಲೋಕಾಯುಕ್ತ ಕಚೇರಿ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರು ತಿಳಿಸಿದ್ದಾರೆ.