ಸಿದ್ದಾಪುರ, ನ.೧೦: ಹಾಡುಹಗಲೇ ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ನೋರ್ವ ದಾರುಣವಾಗಿ ಸಾವನ್ನಪ್ಪಿದ್ದು ಮತ್ತೋರ್ವ ಕಾರ್ಮಿಕ ಪ್ರಾಣಾಪಾ ಯದಿಂದ ಪಾರಾದ ಘಟನೆ ಪಾಲಿ ಬೆಟ್ಟ ಸಮೀಪದ ಖಾಸಗಿ ಸಂಸ್ಥೆಯ ಎಮ್ಮೆಗುಂಡಿ ಕಾಫಿ ತೋಟದೊಳಗೆ ಸೋಮವಾರ ಮಧ್ಯಾಹ್ನ ಸಂಭವಿ ಸಿದೆ. ಟಾಟಾ ಸಂಸ್ಥೆಗೆ ಸೇರಿದ ಎಮ್ಮೆಗುಂಡಿ ಕಾಫಿ ತೋಟದಲ್ಲಿ ಆನೆ ಟ್ಯಾಕರ್ ಆಗಿ ಕೆಲಸ ಮಾಡಿಕೊಂಡಿದ್ದ ಮೇಕೇರಿ ಹೊಸ್ಕೇರಿ ಗ್ರಾಮದ ನಿವಾಸಿ ಕಾರ್ಮಿಕ ಹನುಮಂತ (೫೭) ಎಂಬವರೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ. ಮಧ್ಯಾಹ್ನ ೧೨,೧೫ ರಿಂದ ೧ ಗಂಟೆಯೊಳಗೆ ಕಾರ್ಮಿಕ ಹನುಮಂತ ಕಾರ್ಮಿಕರು ಕೆಲಸ ಮಾಡುವ ಜಾಗದಲ್ಲಿ ಕಾಡಾನೆ ಇದೆಯಾ ಎಂದು ನೋಡಿಕೊಂಡು ಬರಲು ಹೋಗಿದ್ದರು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಒಂಟಿ ಸಲಗ ಕಾಫಿ ತೋಟದೊಳಗಿನಿಂದ ಹಠಾತ್ತನೆ ಹಿಂಬದಿಯಿAದ ಬಂದು ಹನುಮಂತನ ಮೇಲೆ ದಾಳಿ ನಡೆಸಿದೆ. ದಂತದಿAದ ಮನಬಂದAತೆ ಚುಚ್ಚಿದ ಪರಿಣಾಮ ಹನುಮಂತ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ದಂತದಿAದ ತಿವಿದ ಪರಿಣಾಮವಾಗಿ ಹನುಮಂತನ ಶರೀರ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಇದ್ದ ಮತ್ತೋರ್ವ ಕಾರ್ಮಿಕ ಉಮೇಶನ ಮೇಲೆ ದಾಳಿ ನಡೆಸಲು ಮುಂದಾಗಿದ್ದು ಈ ಸಂದರ್ಭದಲ್ಲಿ ಅಪಾಯವನ್ನು ಅರಿತ ಉಮೇಶ ಕೂದಲಳೆಯ ಅಂತರದಿAದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹನುಮಂತ ಸಾವಿನ ವಿಚಾರವನ್ನು ಉಮೇಶ ಕಾಫಿ ತೋಟದ ವ್ಯವಸ್ಥಾಪಕರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಹನುಮಂತ ಮೂಲತಃ ಹಾಸನ ಸಮೀಪದ ರಾಮನಾಥಪುರ ನಿವಾಸಿ. ಕಳೆದು ೩೦ ವರ್ಷಗಳಿಂದ ಟಾಟಾ ಸಂಸ್ಥೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ತೋಟದ ಲೈನ್ಮನೆಯಲ್ಲಿ ವಾಸ ಮಾಡಿಕೊಂಡಿದ್ದರು.
ಮೃತ ಹನುಮಂತ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ಸಂಬAಧ ಮೃತ ಹನುಮಂತನ ಪತ್ನಿ ಪದ್ಮ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ೪ಐದÀನೇ ಪುಟಕ್ಕೆ (ಮೊದಲ ಪುಟದಿಂದ) ಸ್ಥಳಕ್ಕೆ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾರ್ಗದರ್ಶನದಲ್ಲಿ ಎ.ಸಿ.ಎಫ್. ಗೋಪಾಲ, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ, ಉಪವಲಯ ಅರಣ್ಯ ಅಧಿಕಾರಿ ಶಶಿ, ಸಿದ್ದಾಪುರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದರು. ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಹನುಮಂತನ ಮೃತದೇಹವನ್ನು ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಹಾಡಹಗಲೇ ನಡೆದ ಈ ಘಟನೆಯಿಂದಾಗಿ ಕಾರ್ಮಿಕರು ಆತಂಕಕ್ಕೆ ಸಿಲುಕಿದ್ದಾರೆ.
ಈ ಭಾಗದಲ್ಲಿ ಮಿತಿಮೀರಿದ ಕಾಡಾನೆಗಳ ಹಾವಳಿ ಇದ್ದು ಬಾಡಗ ಬಾಣಂಗಾಲ, ಮೇಕೂರು, ಹೊಸ್ಕೇರಿ ಗ್ರಾಮದ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಕಾಡಾನೆಗಳು ದಾಂಧಲೆ ನಡೆಸುತ್ತಿವೆ ಕೃಷಿ ಫಸಲುಗಳನ್ನು ಹಾನಿಗೊಳಿಸುತ್ತಿದೆ ಎಂದು ಬಿಜೆಪಿ ಮುಖಂಡ ಕುಟ್ಟಂಡ ಅಜಿತ್ ಕರುಂಬಯ್ಯ ತಿಳಿಸಿದ್ದಾರೆ. ಮಾನವನ ಮೇಲೆ ಕೂಡ ಕಾಡಾನೆ ದಾಳಿ ನಡೆಸುತ್ತಿದೆ ಎಂದು ತಿಳಿಸಿದ ಅವರು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾರ್ಮಿಕ ಮುಖಂಡರ ಅಕ್ರೋಶ
ಕಾರ್ಮಿಕ ಹನುಮಂತ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಂಘಟನೆಗಳ ಮುಖಂಡರಾದ ರಮೇಶ ಹಾಗೂ ಭರತ್ ಸೋಮಪ್ಪ. ಮಹಾದೇವ್ ಮಾತನಾಡಿ ಕಾರ್ಮಿಕರ ಮೇಲೆ ನಿರಂತರವಾಗಿ ಕಾಡಾನೆಗಳು ದಾಳಿ ನಡೆಸುತ್ತಿದ್ದರೂ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದೆ, ಶಾಶ್ವತ ಯೋಜನೆಯನ್ನು ರೂಪಿಸದೆ ನಿರ್ಲಕ್ಷ ವಹಿಸುತ್ತಿದೆ ಎಂದು ಆರೋಪಿಸಿದರು. ಕಾಡಾನೆ ದಾಳಿಯಿಂದ ಅಮಾಯಕ ಕಾರ್ಮಿಕರು ಸಾವನ್ನಪ್ಪುತ್ತಿದ್ದು ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಸರಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಹಾವಳಿ ಇದ್ದರೂ ಕೂಡ ಇದನ್ನು ತಡೆಗಟ್ಟುವಲ್ಲಿ ರಾಜ್ಯದ ಅರಣ್ಯ ಸಚಿವರು ಜಿಲ್ಲೆಯ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು. ಹೊರ ಜಿಲ್ಲೆಗಳಲ್ಲಿ ಹುಲಿಗಳು ಮಾನವನ ಮೇಲೆ ದಾಳಿ ನಡೆಸಿ ಹತ್ಯೆ ಮಾಡುತ್ತಿವೆ. ಜಿಲ್ಲೆಯಲ್ಲಿ ಕಾಡಾನೆಗಳು ಮಾನವನ ಮೇಲೆ ದಾಳಿ ನಡೆಸಿ ಹತ್ಯೆ ಮಾಡುತ್ತಿದೆ. ಆದರೆ ಅರಣ್ಯ ಇಲಾಖೆ ಸಚಿವರು ಶಾಶ್ವತ ಯೋಜನೆಯನ್ನು ರೂಪಿಸದೆ ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಕಾಡಾನೆಗಳ ಕಾರ್ಯಾಚರಣೆ
ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಹನುಮಂತ ಕೆಲಸ ಮಾಡುತ್ತಿದ್ದ ಭಾಗದಲ್ಲಿ ಕಾಫಿ ತೋಟಗಳಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಪೊನ್ನಣ್ಣನವರ ಸೂಚನೆಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ದೇವಮಚ್ಚಿ ಅರಣ್ಯಕ್ಕೆ ಅಟ್ಟಿಸಿದ್ದಾರೆ.
ಶಾಸಕ ಪೊನ್ನಣ್ಣ ಭರವಸೆ
ಹನುಮಂತ ಅವರ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯು ಬೇಸರ ತಂದಿದೆ. ಮೃತ ಕುಟುಂಬಕ್ಕೆ ಸರಕಾರದಿಂದ ಸಿಗುವ ಪರಿಹಾರವನ್ನು ತುರ್ತಾಗಿ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ದೂರವಾಣಿ ಮೂಲಕ ಶಕ್ತಿ ಗೆ ಮಾಹಿತಿ ನೀಡಿದ್ದಾರೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ಕಾಡಾನೆಗಳು ಸಂಚರಿಸುತ್ತಿರುವ ಕಾಫಿ ತೋಟಗಳ ರಸ್ತೆಗಳಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಬೆಳಿಗ್ಗೆ ಹಾಗೂ ಸಂಜೆ ಕಾಲ್ನಡಿಗೆಯಲ್ಲಿ ತೆರಳುವಾಗ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಪೊನ್ನಣ್ಣ ಮನವಿ ಮಾಡಿದ್ದಾರೆ.
ಪರಿಹಾರ ವಿತರಣೆ
ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಹನುಮಂತನ ಕುಟುಂಬಕ್ಕೆ ತುರ್ತು ಪರಿಹಾರವಾಗಿ ರೂ.೫ ಲಕ್ಷದ ಚೆಕ್ ಅನ್ನು ಕುಟುಂಬಸ್ಥರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಸ್ತಾಂತರ ಮಾಡಿದರು.
-ವರದಿ : ವಾಸು