ನಾಪೋಕ್ಲು, ನ. ೧೦: ಕೊಡಗು ಜಿಲ್ಲೆಯ ನಾಗರಿಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೆದಾರ ಸಮಸ್ಯೆಯ ಕುರಿತು ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು.
ಕಳೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರ ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನಾ ಸಮಿತಿಯ ೨ನೇ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಚರ್ಚಿಸಿ ಕೈಗೊಳ್ಳಲಾಯಿತು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‌ರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.