ಮಡಿಕೇರಿ, ನ. ೧೧: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟಿçÃಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ತಾ.೧೩ ರಂದು ಪೊನ್ನಂಪೇಟೆಯಿAದ ಗೋಣಿಕೊಪ್ಪದವರೆಗೆ ನಡೆಯುವ ಏಕತಾ ಯಾತ್ರೆಯಲ್ಲಿ ಬಿಜೆಪಿ ಭಾಗಿಯಾಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ ೯.೩೦ ಗಂಟೆಗೆ ಪೊನ್ನಂಪೇಟೆಯಿAದ ಏಕತಾ ಪಾದಯಾತ್ರೆ ಆರಂಭಗೊAಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ.
ಮೈಸೂರು, ಕೊಡಗು ಸಂಸದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು ಏಕತಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.