ಮಡಿಕೇರಿ: ವೀರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನ ಆಚರಿಸಲಾಯಿತು.

ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಕ್ಕಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತಾ ಸಿಹಿ ಹಂಚಿ ಮಕ್ಕಳೊಂದಿಗೆ ಸಂಭ್ರಮಿಸಿದರು.

ಇದೇ ಸಂದರ್ಭ ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡಿ, ಮಕ್ಕಳಿಗೆ ದೊರಕುತ್ತಿರುವ ಎಲ್ಲಾ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರಾದ ಜೋಕಿಮ್, ಸೂರಜ್ ಹೊಸೂರು, ಮಂಜುನಾಥ್, ನರೇಂದ್ರ ಕಾಮತ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನ ಕುಮಾರ್, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರುಗಳ ನೇತೃತ್ವದಲ್ಲಿ ಮಡಿಕೇರಿಯ ದಾಸವಾಳ ಅಂಗನವಾಡಿ ಕೇಂದ್ರ, ಮಹದೇವಪೇಟೆ ಅಂಗನವಾಡಿ ಕೇಂದ್ರ, ಪುಟಾಣಿ ನಗರ ಅಂಗನವಾಡಿ ಕೇಂದ್ರ, ರಾಘವೇಂದ್ರ ದೇವಸ್ಥಾನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಛದ್ಮವೇಷ, ನೃತ್ಯಗಳು ನೆರವೇರಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತ, ಗೀತಾ, ಶೃತಿ, ಉಮಾವತಿ ಮತ್ತು ಸಹಾಯಕಿಯರಾದ ಅನಿತಾ, ದೈವಾಣಿ, ಇಂದ್ರಮ್ಮ, ಶ್ಯಾಮಲ ಅವರುಗಳು ಸಮುದಾಯದ ಸಹಕಾರ ಪಡೆದು ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಸನ್ನ ಕುಮಾರ್ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೋಷಕರು, ಶಿಕ್ಷಕರೊಂದಿಗೆ ಸಮುದಾಯದ ಪ್ರತಿಯೊಬ್ಬರು ಸಹಕರಿಸಬೇಕಾಗಿ ತಿಳಿಸಿದರು. ಮಕ್ಕಳ ಶಿಕ್ಷಣಕ್ಕೆ ಪೋಷಕರು, ಅಂಗನವಾಡಿ ಕಾರ್ಯಕರ್ತರು ಹೆಚ್ಚಿನ ಆಸಕ್ತಿ ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭವಾಗಿರುವ ಮೊಂಟೆಸ್ಸರಿ ಕೇಂದ್ರಗಳಿಗೆ ಮಕ್ಕಳನ್ನು ಸೇರಿಸಿ ಕನ್ನಡದೊಂದಿಗೆ ಇಂಗ್ಲಿಷ್ ಅನ್ನು ಕಲಿಸಲು ಸಹಕರಿಸಬೇಕಾಗಿ ತಿಳಿಸಿದರು.

ಸವಿತಾ ಕೀರ್ತನ್ ಅವರು ಮಾತನಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಗೆ ಬಹುಮಾನ ನೀಡಿದ, ಅಲಂಕಾರಕ್ಕೆ ಸಹಕರಿಸಿದ, ದಾನಿಗಳ ಸೇವೆಯನ್ನು ಶ್ಲಾಘಿಸಿದರು.

ನಗರಸಭೆ ಪೌರಾಯುಕ್ತ ರಮೇಶ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಾಂಸ್ಕೃತಿಕ ಕಲಾವೇದಿಕೆಯ ಅಧ್ಯಕ್ಷ ಮಹೇಶ್ ಅವರು ಮಾತನಾಡಿ ಪ್ರಾರಂಭಿಕ ಹಂತದಲ್ಲಿ ಮಕ್ಕಳಿಗೆ ಸ್ವಚ್ಛತೆಯ ಪ್ರಾಮುಖ್ಯತೆಯನ್ನು ಹೇಳಿಕೊಡುವಂತೆ ಪೋಷಕರಿಗೆ ತಿಳಿಸಿದರು.

ರಾಘವೇಂದ್ರ ದೇವಸ್ಥಾನದ ಅಂಗನವಾಡಿ ಕೇಂದ್ರದಲ್ಲಿ ಐದು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ನಡೆದ "ಮಕ್ಕಳ ದಿನಾಚರಣೆ” ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ ಡಿ.ಆರ್. ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಶಾಲಾ-ಕಾಲೇಜುಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರೊಂದಿಗೆ ತಮ್ಮ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಕಲೆಗಳನ್ನು ಬೆಳಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ೯-೧೬ ವರ್ಷದ ಮಕ್ಕಳು ವಿವಿಧ ಸ್ಫರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಲಾಯಿತು.

ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಮಕ್ಕಳನ್ನು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ೧೦೦ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿರುತ್ತಾರೆ ಎಂದರು.

ಸುಗಮ ಸಂಗೀತದಲ್ಲಿ ಅಪೇಕ್ಷ ಆರ್. ರೈ, ಭರತ್ಯ ನಾಟ್ಯದಲ್ಲಿ ಶ್ರೀವರ್ದನ್ ಕೆ.ಎಸ್., ವಿಜ್ಞಾನ ವಿಭಾಗದಲ್ಲಿ ಜಶ್ವಿನ್ ಬೆಳ್ಯಪ್ಪ, ರಕ್ಷಿತ ಎಸ್., ಕಥೆ-ಕವನ-ಪ್ರಬಂಧ ಸ್ಪರ್ಧೆಯಲ್ಲಿ ಅರ್ಪಿತಾ ಬೆಳ್ಯಪ್ಪ, ದೀಕ್ಷಿತ್ ಎಂ.ಪಿ. ಹಾಗೂ ಚಿತ್ರಕಲೆ-ಜೇಡಿ ಮಣ್ಣಿನ ಕಲೆಯಲ್ಲಿ ಬಿ.ಎಸ್. ನಿಶಾನ್ ಹಾಗೂ ಐಶ್ವರ್ಯ ಎ.ಎಸ್. ಈ ಎಂಟು ಮಕ್ಕಳು ವಿಜೇತರಾಗಿ ರಾಜ್ಯಮಟ್ಟದಲ್ಲಿ ನಡೆಯುವ ಕಲಾ ಶ್ರೀ ಪ್ರಶಸ್ತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಕೂಡಿಗೆ: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ವತಿಯಿಂದ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಶಾಲೆಗಳಲ್ಲಿ ಆಯೋಜಿಸಲಾಗಿದ್ದ ಮಕ್ಕಳ ವೇಷಭೂಷಣ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ವಿವಿಧ ದಿರಿಸುಗಳನ್ನು ತೊಟ್ಟು ಗಮನ ಸೆಳೆದರು. ಮಕ್ಕಳು ಸಂಭ್ರಮದಿAದ ಪ್ರತಿಭೆಯ ಅನಾವರಣಗೊಳಿಸಿ ಖುಷಿ ಪಟ್ಟರು. ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಕುರಿತು ವಿಚಾರ ಮಂಡಿಸುವ ಮೂಲಕ ಗಮನ ಸೆಳೆದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ವಿವಿಧ ಉಚಿತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಮುದಾಯ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಕೆ.ಹರೀಶ್ ಮಾತನಾಡಿ, ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳ ಪ್ರಗತಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಶಾಲೆಯ ಹಿರಿಯ ಶಿಕ್ಷಕ ಕೆ. ಗೋಪಾಲಕೃಷ್ಣ, ಶಾಲೆಗಳಲ್ಲಿ ಸರ್ಕಾರದ ವತಿಯಿಂದ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ. ರಮ್ಯ, ಬಿ.ಎನ್ ಸುಜಾತ, ಎಸ್.ಎಂ. ಗೀತಾ, ಬಿ.ಎಸ್ ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಕಚೇರಿ ಸಿಬ್ಬಂದಿ ಎಂ. ಉಷಾ, ಶಾಲಾ ನಾಯಕರಾದ ಮಾಳವಿಕ, ಶಾಹಿರ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು. ವಿದ್ಯಾರ್ಥಿನಿ ದಿಶಾ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ. ಸೌಮ್ಯ ವಿವಿಧ ಮನೋರಂಜನೆಯ ಆಟಗಳನ್ನು ಆಡಿಸಿದರು. ಕಡಂಗ: ಸ್ಥಳೀಯ ವಿಜಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು.

ಶಿಕ್ಷಕರೇ ಪ್ರಮುಖ ಪ್ರದರ್ಶಕರಾಗಿ ವೇದಿಕೆಯಲ್ಲಿ ನೃತ್ಯ, ಹಾಸ್ಯ ಸಂಭಾಷಣೆ, ನಾಟಕ ಮತ್ತು ಪ್ರೇರಣಾದಾಯಕ ಮಾತುಗಳ ಮೂಲಕ ಮಕ್ಕಳಿಗೆ ಮನರಂಜನೆ ನೀಡುವುದಲ್ಲದೆ ಮೌಲ್ಯಭಾವನೆಗಳನ್ನು ಹಂಚಿಕೊAಡರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಹಾಗೂ ಭಾಷಣಗಳನ್ನು ಮಾಡಿದರು.

ಶನಿವಾರಸಂತೆ: ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದ್ದು, ಮುಂದಿನ ಪ್ರಜೆಗಳಾದ ಮಕ್ಕಳು ಉತ್ತಮ ಸದ್ಗುಣಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಬ್ರೈಟ್ ಅಕಾಡೆಮಿ ವಿದ್ಯಾಸಂಸ್ಥೆಯ ಶಾಲಾ ಸಂಸತ್ ಮುಖ್ಯಸ್ಥೆ ೫ನೇ ತರಗತಿ ವಿದ್ಯಾರ್ಥಿನಿ ಸುನೈನಾ ಅಭಿಪ್ರಾಯ ವ್ಯಕ್ತಪಡಿಸಿದರು.

ವಿದ್ಯಾಸಂಸ್ಥೆಯ ಶಾಲಾ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ಸಾಹಿತಿ ಶ.ಗ. ನಯನತಾರಾ ಮಾತನಾಡಿ, ಭಾರತದ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಮಕ್ಕಳ ಬಗೆಗಿನ ತಮ್ಮ ಪ್ರೀತಿ-ಅಭಿಮಾನ ವ್ಯಕ್ತಪಡಿಸಿ ತಮ್ಮ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವಂತೆ ಕರೆ ನೀಡಿದರು. ಆದರೆ, ಶಾಲಾ ಮಕ್ಕಳಂತೆ ಸಮಾಜದ ಇತರ ಮಕ್ಕಳು ಈ ಆಚರಣೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ದೇಶದ ತಳಪಾಯವೇ ಮಕ್ಕಳಾಗಿದ್ದು; ಮಕ್ಕಳ ದಿನಾಚರಣೆ ಸಮಸ್ತ ಮಕ್ಕಳ ಅಭಿವೃದ್ಧಿಗಾಗಿ ಆಚರಿಸುವಂಥ ಧ್ಯೇಯವನ್ನು ಹೊಂದಿದ ದಿನವಾಗಲಿ ಎಂದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಹೇಮಾ ಪರಮೇಶ್ ಮಾತನಾಡಿ, ದೇಶದ ಮುಂದಿನ ಪ್ರಜೆಗಳೆನಿಸುವ ಮಕ್ಕಳ ಭವಿಷ್ಯದ ಬಗ್ಗೆ ಪೋಷಕರ ಜತೆ ಶಿಕ್ಷಕರು ಕೈಜೋಡಿಸಬೇಕು. ಮಕ್ಕಳಿಗೆ ಭರವಸೆಯ ಬೆಳಕು ನೀಡಬೇಕು ಎಂದರು. ಪ್ರಾಂಶುಪಾಲ ಹರೀಶ್ ಲಕ್ಷ್ಮಣ್ ಮಾತನಾಡಿ, ಮಕ್ಕಳ ದಿನಾಚರಣೆಯ ಹಿನ್ನೆಲೆ, ನೆಹರು ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳನ್ನು ತಿಳಿಸಿ, ಭವ್ಯ ಭಾರತದ ನಿರ್ಮಾಣವೇ ಮಕ್ಕಳ ಗುರಿಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ೫ನೇ ತರಗತಿ ವಿದ್ಯಾರ್ಥಿ ಅನ್ವಿಕ್ ಮಾತನಾಡಿ, ಮಕ್ಕಳಾದ ನಾವೆಲ್ಲಾ ಜವಾಹರಲಾಲ್ ನೆಹರು ಅವರ ಕನಸನ್ನು ನನಸಾಗಿಸಿ, ಆದರ್ಶಗಳನ್ನು ಪಾಲಿಸುವ ಉತ್ತಮ ಪ್ರಜೆಗಳಾಗೋಣ ಎಂದರು. ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳಾದ ಪ್ರಣವತಿ, ವಾಸುಕಿ, ತ್ರಿಶಾನ್, ಸೌರವ್, ರಚಿತಾ, ರಿಧಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ನಿರ್ಮಿತಾ ಸ್ವಾಗತಿಸಿ, ಧನಲಕ್ಷ್ಮೀ ನಿರೂಪಿಸಿದರು.

ನಾಪೋಕ್ಲು: ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಪ್ರೊಫೆಸರ್ ಕಲ್ಯಾಟಂಡ ಪೂಣಚ್ಚ ಮಾತನಾಡಿ, ನೆಹರುರವರ ಜನ್ಮದಿನ ದಿನದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.

ಶಾಲೆಯ ಪ್ರಾಂಶುಪಾಲರಾದ ಬಿ.ಎಂ ಶಾರದ ಮಾತನಾಡಿ, ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ದೇಶಕ್ಕಾಗಿ ಅವರು ನೀಡಿದ ಕೊಡುಗೆ ಸ್ಮರಣೀಯ ಎಂದರು. ಶಿಕ್ಷಕಿ ಲೀನಾ ಸಿ.ಕೆ, ಸಾತ್ವಿಕ ಕೆ.ಎಸ್, ಮಾತನಾಡಿದರು.

ಶಾಲಾ ಮಂತ್ರಿಮAಡಲದ ಸಾಂಸ್ಕೃತಿಕ ನಾಯಕಿ ಸಿಂಚನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ, ನಿರ್ದೇಶಕರಾದ ನವೀನ್ ಅಪ್ಪಯ್ಯ, ಸುಬ್ಬಯ್ಯ, ಶಾಲಾ ನಾಯಕಿ ಸಾತ್ವಿಕ ಕೆ.ಎಸ್., ಗಾನವಿ ಬಿ.ಎಂ., ಮನ್ನಹ ವಿ. ಮುತ್ತಮ್ಮ ಎನ್.ಎಂ., ಸಹನಾ ಪಿ.ಎಸ್, ಸಮನ್ವಿತ ಪಿ.ಎಸ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ನೀಲ್ ಮೇದಪ್ಪ ಪ್ರಾರ್ಥಿಸಿದರು. ಶಿಕ್ಷಕಿ ನೀತಾ ಸಿ.ಎಸ್. ಸ್ವಾಗತಿಸಿದರು. ಅತಿಥಿಗಳ ಪರಿಚಯವನ್ನು ರೀನಾ ಕೆ.ಎಸ್. ಮಾಡಿದರು. ಶಿಕ್ಷಕ ಭಗವತಿ ಪ್ರಸಾದ್ ಎ.ಟಿ. ನಿರೂಪಿಸಿ ಸೀತಮ್ಮ ಕೆ.ಆರ್ ವಂದಿಸಿದರು.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. *ಗೋಣಿಕೊಪ್ಪ: ಭಾರತದ ಮೊದಲ ಪ್ರಧಾನಿ ನೆಹರು ಅವರ ಜನ್ಮ ದಿನವನ್ನು ಗೋಣಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಚರಿಸಲಾಯಿತು.

ಶಾರದ ಪೂಜೆ ನೆರವೇರಿಸುವ ಮೂಲಕ ವಿದ್ಯೆಗಾಗಿ ಪ್ರಾರ್ಥಿಸಿದ ವಿದ್ಯಾರ್ಥಿಗಳು, ನಂತರ ಶಾಲೆಯಲ್ಲಿ ಆಯೋಜಿಸಿದ್ದ ಜಾದೂ ಪ್ರದರ್ಶನವನ್ನು ಕಣ್ತುಂಬಿಕೊAಡರು.

ನಂತರ ಪೋಷಕರ ಮಹಾಸಭೆ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಭಾಗವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ಚಾಚಾ ನೆಹರು ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ಬಹು ಹೆಮ್ಮೆಯ ವಿಚಾರ. ಸರ್ಕಾರಿ ಶಾಲೆಯಲ್ಲಿ ಓದಿದ ಬಹುತೇಕ ವಿದ್ಯಾರ್ಥಿಗಳು, ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಂತಹ ಸ್ಪೂರ್ತಿದಾಯಕ ನಡೆಗಳನ್ನು ಉತ್ತೇಜಿಸಿ, ಮಕ್ಕಳು ದೇಶಕ್ಕಾಗಿ ಸೇವೆ ಸಲ್ಲಿಸುವಂತ, ದೇಶಭಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸಿ ಓದಿನ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಭದ್ರತೆಯ ಬಗ್ಗೆ ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಇರುವ ಕಾನೂನು ವ್ಯವಸ್ಥೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಿದರು.

ವಿದ್ಯಾರ್ಥಿಗಳನ್ನು ಉತ್ತಮ ನಡೆ ನುಡಿಗಳು ಬೆಳೆಸಲು ಪೋಷಕರು ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸರ್ಕಾರಿ ಶಾಲೆಯಲ್ಲಿ ಸಿಗುವ ಸವಲತ್ತುಗಳು, ನುರಿತ ಶಿಕ್ಷಕರ ಶಿಕ್ಷಣದ ವ್ಯವಸ್ಥೆಗಳನ್ನು ಪೋಷಕರಿಗೆ ತಿಳಿಸಿಕೊಡಲಾಯಿತು. ಶಾಲೆಯ ಅಭಿವೃದ್ಧಿ ಸಮಿತಿ ಜತೆಗೆ ಪೋಷಕರು ಶಾಲೆಯ ಕಡೆ ಮಕ್ಕಳನ್ನು ಕರೆತರಲು ಮತ್ತು ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಕ್ರಮ ತೆಗೆದುಕೊಳ್ಳಬೇಕೆಂಬ ಹಲವಾರು ಮಾಹಿತಿಗಳನ್ನು ಹಂಚಿಕೊAಡರು. ಶಿಕ್ಷಕರುಗಳಾದ ಬಿ.ಆರ್ ಸತೀಶ್ ಹಾಗೂ ಸ್ನೇಹ ಕಾವೇರಮ್ಮ ಪ್ರೊಜೆಕ್ಟರ್ ಮೂಲಕ ಪೋಷಕರಿಗೆ ಶಾಲೆಯ ಪ್ರಗತಿಗಳ ಬಗ್ಗೆ ತಿಳಿಸಿಕೊಟ್ಟರು. ಸಭೆಯ ನಂತರ ವಿದ್ಯಾರ್ಥಿಗಳಿಗೆ ಗೋಣಿಕೊಪ್ಪ ಶಿವಾಜಿ ಯುವಸೇನೆ ಸಮಿತಿ ವತಿಯಿಂದ ಸಿಹಿ ಹಂಲಾಯಿತು. ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕೊಣಿಯಂಡ ಬೋಜಮ್ಮ, ಬಿ.ಎನ್ ಪ್ರಕಾಶ್, ಶಾಲೆ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ದಿವ್ಯ ರೈ, ಶಾಲೆಯ ಸಮೂಹ ಸಂಪನ್ಮೂಲ ವ್ಯಕ್ತಿ ರಾಧಾ, ಶಾರದಾ ಪೂಜೆ ನೆರವೇರಿಸಿದ ಅರ್ಚಕ ಪ್ರಸಾದ್, ಜಾದೂ ಕಲಾವಿದ ಹಾಗೂ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ವೀರಾಜಪೇಟೆ: ವಿದ್ಯಾರ್ಥಿಗಳು ಸರಕಾರ ನೀಡುತ್ತಿರುವ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಪಾಠದೊಂದಿಗೆ ಕ್ರೀಡೆಯಲ್ಲೂ ಭಾಗವಹಿಸುವ ಮೂಲಕ ಛಲದಿಂದ ಗುರಿ ಮುಟ್ಟುವಂತಾಗಬೇಕು ಎಂದು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್ ಅಧ್ಯಕ್ಷರಾದ ಶೀಭಾ ಪ್ರಥ್ವಿನಾಥ್ ಹೇಳಿದರು.

ಮಕ್ಕಳ ದಿನಾಚರಣೆ ಅಂಗವಾಗಿ 'ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್' ವತಿಯಿಂದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆ ಹಾಗೂ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಲಯಾಳಿ ಮಹಿಳಾ ಅಸೋಸಿಯೇಷನ್ ವತಿಯಿಂದ ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಹಿಳೆಯರಿಗೆ ಟೈಲರಿಂಗ್, ಸ್ವ ಉದ್ಯೋಗಕ್ಕಾಗಿ ಧನ ಸಹಾಯ, ಅನಾರೋಗ್ಯದಿಂದ ಬಳಲುತ್ತಿರುವರಿಗೆ ಸಹಾಯ ಹಸ್ತ ನೀಡಲಾಗಿದೆ.

ಮುಂದಿನ ದಿನದಲ್ಲಿ ಶಾಲೆಗಳಲ್ಲಿ ಮಕ್ಕಳಿಗಾಗಿ ಹೆಚ್ಚು ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.

ಉರ್ದು ಶಾಲಾ ಮುಖ್ಯ ಶಿಕ್ಷಕರಾದ ಎನ್. ಅನಸೂಯ ಅವರು ಮಾತನಾಡಿ, ಮಕ್ಕಳು ಸರಿಯಾದ ದಾರಿಯಲ್ಲಿಯೇ ಸಾಗಬೇಕು. ತಮ್ಮ ಪೋಷಕರು ಕಷ್ಟಪಟ್ಟು ಮಕ್ಕಳು ವಿದ್ಯಾಭ್ಯಾಸ ಕಲಿತು ಉನ್ನತ ಹುದ್ದೆಗೇರಬೇಕೆಂಬ ಆಸೆ ಇಟ್ಟುಕೊಂಡಿರುತ್ತಾರೆ. ಅದನ್ನು ನೆರವೇರಿಸುವ ಮೂಲಕ ಹೆಚ್ಚಿನ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗುವಂತೆ ಹೇಳಿದರು.

ಅಸೋಸಿಯೇಷನ್ ಕಾರ್ಯದರ್ಶಿ ಪುಷ್ಪಲತಾ ಶಿವಪ್ಪ ಮಾತನಾಡಿ, ಇತರೆ ಯಾವುದೇ ಭಾಷೆಯನ್ನು ತಮ್ಮ ಮನೆಯಲ್ಲಿ ಮಾತನಾಡಿದರೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಕನ್ನಡವನ್ನೇ ಮಾತನಾಡಬೇಕು. ಕನ್ನಡ ಬಾರದೆ ಇದ್ದವರಿಗೆ ಕನ್ನಡ ಭಾಷೆಯನ್ನು ಕಲಿಸುವಂತಾಗಬೇಕು. ಕನ್ನಡ ನಾಡು-ನುಡಿ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.

ವೇದಿಕೆಯಲ್ಲಿ ಮಲಯಾಳಿ ಅಸೋಸಿಯೇಷನ್ ಉಪಾಧ್ಯಕ್ಷೆ ಚೈತ್ರ ಮೋಹನ್, ಗೌ.ಅಧ್ಯಕ್ಷರಾದ ರೀತಾ ರಾಜನ್, ಸಹ ಕಾರ್ಯದರ್ಶಿ ಪದ್ಮ, ಖಜಾಂಚಿ ಶ್ರೀಕಲಾ, ಸ್ಮಿತಾ ಸಂತೋಷ್, ರಾಖಿ ಸಜೀವನ್, ಶ್ರೀದೇವಿ ಸಂತೋಷ್, ಶಾಂತ ಚಂದ್ರನ್, ಶೀಲಾ ಸುನೀಲ್, ಹೇಮಾ, ಪುರಸಭೆ ಮಾಜಿ ಸದಸ್ಯ ಸಿ.ಕೆ ಪ್ರಥ್ವಿನಾಥ್ ಮತ್ತಿತರರು ಭಾಗವಹಿಸಿದ್ದರು. ಸುಂಟಿಕೊಪ್ಪ: ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳಸಂತೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಸರಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಬಾಲಕೃಷ್ಣ ಅವರು ಮಾತನಾಡಿ, ಪೋಷಕರು ಮಕ್ಕಳ ಭವಿಷ್ಯದ ದಿಸೆಯಲ್ಲಿ ಮಕ್ಕಳ ವಿದ್ಯಾರ್ಜನೆಗೆ ಪರಿಶ್ರಮ ವಹಿಸುವುದಲ್ಲದೆ ಮಕ್ಕಳ ವ್ಯಾಸಂಗದ ಸಂದರ್ಭದಲ್ಲಿ ಪ್ರಶಾಂತ ವಾತಾವರಣವನ್ನು ಒದಗಿಸಿಕೊಡಬೇಕೆಂದರು. ಕಾಲ ಕಾಲಕ್ಕೆ ಪೋಷಕರು ಶಿಕ್ಷಕರೊಂದಿಗೆ ನಿಕಟ ಸಂಪರ್ಕ ಹಾಗೂ ಶಾಲೆಗಳಿಗೆ ಭೇಟಿ ನೀಡುವುದರಿಂದ ಮಕ್ಕಳ ಕಲಿಕೆಯ ಪ್ರಮಾಣವು ಅಭಿವೃದ್ಧಿಗೊಳ್ಳಲು ಸಹಕಾರಿಯಾಗುತ್ತದೆ ಎಂದು ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಮಕ್ಕಳು ಮನೆ ಹಾಗೂ ತೋಟಗಳಲ್ಲಿ ಬೆಳೆದ ಸೊಪ್ಪು, ಕಾಯಿ, ತರಕಾರಿಗಳು, ಪಾನಿಪೂರಿ, ಚುರುಮುರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಿಲ್ ರೋಡ್ರಿಗಸ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಶಾಲಾ ಸಹ ಶಿಕ್ಷಕರುಗಳಾದ ಚಿತ್ರ, ಲಿಯೋನಾ, ಸುನಂದ, ಪ್ರಕಾಶ, ಶಾಂತ ಹೆಗ್ಡೆ, ಜಯಶ್ರೀ, ಪ್ರಥಮ ದರ್ಜೆ ಸಹಾಯಕಿ ಯಶೋಧ ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಇದ್ದರು.