ಕುಶಾಲನಗರ, ನ. ೧೫: ಜಿಲ್ಲಾ ಮೀನುಗಾರಿಕೆ ಇಲಾಖೆಯಿಂದ ಮೀನು ಸಾಕಾಣಿಕೆ ದಾರರು, ಮೀನು ಮಾರಾಟ ಮಾಡುವ ಫಲಾನು ಭವಿಗಳಿಗೆ ಕಾರ್ಯಾ ದೇಶ ಪತ್ರ ವಿತರಣೆ ಮಾಡಲಾಯಿತು.
ಕುಶಾಲನಗರ ಗುಂಡೂ ರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮೀನು ಮರಿಗಳನ್ನು ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರು ಇದ್ದರು.