ಮಡಿಕೇರಿ, ನ.೧೫: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸುಂಟಿಕೊಪ್ಪ ಮಹಿಳಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ೭೨ ನೇ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ದಿನಾಚರಣೆ ತಾ. ೧೬ ರಂದು ಬೆಳಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪ ಪ್ಯಾಕ್ಸ್ ಮಂಜನಾಥಯ್ಯ ಸಹಕಾರ ಭವನದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಕೊಡಂದೇರ ಪಿ. ಗಣಪತಿ, ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ ಸುಂಟಿಕೊಪ್ಪ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಲೀಲಾ ಮೇದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.