ಸೋಮವಾರಪೇಟೆ, ನ. ೨೫: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿದವು.
ಉದ್ಘಾಟನಾ ಸಮಾರಂಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಮಾತನಾಡಿ, ಕನ್ನಡದ ಸಿರಿಸಂಪತ್ತನ್ನು ಕಿರಿಯ ಪೀಳಿಗೆಗೆ ಪರಿಚಯಿಸುವ ಜೊತೆಗೆ ಭಾಷೆಯ ಮೇಲೆ ಒಲವನ್ನು ಬೆಳೆಸುವ ಉದ್ದೇಶದಿಂದ ಕಸಾಪ ವತಿಯಿಂದ ಪ್ರತಿವರ್ಷವೂ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಸಾಹಿತ್ಯವು ನಾಡಿನ ಆತ್ಮ. ಈ ಭಾಷೆಯನ್ನು ಉಳಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕೆಂದು ಹೇಳಿದರು. ವೇದಿಕೆಯಲ್ಲಿ ಕಸಾಪ ಪದಾಧಿಕಾರಿಗಳಾದ ನಂಗಾರು ಕೀರ್ತಿ, ಜ್ಯೋತಿ ಅರುಣ್, ಎ.ಪಿ. ವೀರರಾಜು, ಸಾಹಿತಿ ಜಲ ಕಾಳಪ್ಪ, ಶಿಕ್ಷಕಿ ಕಾವ್ಯ ಇದ್ದರು.