ಕಣಿವೆ, ನ. ೨೫: ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾ.ಪಂಯ ಕೆಡಿಪಿ ಸಭೆ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಅಧ್ಯಕ್ಷತೆಯಲ್ಲಿ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾ.ಪಂ. ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಗಳಿಗೆ ಸಂಬAಧಿಸಿದ ಮಾಹಿತಿಯನ್ನು ನೀಡಿದರು.
ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ವಿತರಣೆ ಮಾಡಲಾಗುತ್ತಿದ್ದು, ಪ್ರತಿ ಮೊಟ್ಟೆಗೆ ೫.೩೦ ರೂ. ನಿಗದಿಪಡಿಸಿದ್ದು ಮಾರುಕಟ್ಟೆ ದರ ಜಾಸ್ತಿ ಇರುವುದರಿಂದ ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ಸಮಸ್ಯೆಯ ಬಗ್ಗೆ ಬಸವನಹಳ್ಳಿ ಪ್ರೌಢಶಾಲಾ ಶಿಕ್ಷಕ ಮಹೇಂದ್ರ ಹೇಳಿದರು. ಗ್ರಾಮ ಪಂಚಾಯಿತಿ ವತಿಯಿಂದ ಈಗಾಗಲೇ ತಮ್ಮ ಶಾಲೆಗೆ ಸುಸಜ್ಜಿತ ಶೌಚಾಲಯ, ಆವರಣ ಗೋಡೆ ಹಾಗೂ ಸಭಾಭವನಕ್ಕೆ ಇಂಟರ್ಲಾಕ್ ಅಳವಡಿಕೆ ಮಾಡಿ ಕೊಟ್ಟಿದ್ದು, ಸರ್ಕಾರದಿಂದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂಬುದಾಗಿ ಅವರು ಮಾಹಿತಿ ನೀಡಿದರು. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಭಿಯಂತರ ಯೋಗಾಚಾರ್ ಮಾತನಾಡಿ, ಮಾದಪಟ್ಟಣ ಗ್ರಾಮಕ್ಕೆ ಎಲಿಫೆಂಟ್ ಕಾರಿಡಾರ್ ರೈಲ್ವೆ ಕಂಬಿ ಅಳವಡಿಸುವ ಸಲುವಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ನೀರಾವರಿ ನಿಗಮದ ಕಿರಿಯ ಅಭಿಯಂತರ ಕಿರಣ್ ಮಾತನಾಡಿ, ತಮ್ಮ ವ್ಯಾಪ್ತಿಯ ನಾಲೆಗಳ ಸ್ವಚ್ಛತಾ ಕಾರ್ಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಬಸವನಹಳ್ಳಿ ಹಾಗೂ ಮಾದಪಟ್ಟಣ ಗ್ರಾಮಗಳಲ್ಲಿ ನಾಲೆಗಳಿಂದ ಗ್ರಾಮದ ಜನರಿಗೆ ಯಾವುದೇ ಉಪಯೋಗವಿಲ್ಲ ನಾಲೆಗಳನ್ನು ಮುಚ್ಚುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದರು.
ಹಾಲು ಉತ್ಪಾದಕರಿಗೆ ಕಳೆದ ಆರು ತಿಂಗಳಿAದ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ ಎಂಬುದಾಗಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಮಾಹಿತಿಯನ್ನು ನೀಡಿದರು ಪಶುಪಾಲನ ಇಲಾಖೆಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಈಗಾಗಲೇ ಕಾಲುಬಾಯಿ ಜ್ವರಕ್ಕೆ ಸಂಬAಧಿಸಿದAತೆ, ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭವಾನಿ ಮಾತನಾಡಿ, ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ಮಾದಪಟ್ಟಣ ಗ್ರಾಮದ ಗೋಮಾಳ ಜಾಗವು ಅತಿಕ್ರಮಣವಾಗುತ್ತಿದ್ದು ಸದರಿ ಅತಿಕ್ರಮಣವನ್ನು ತೆರವುಗೊಳಿಸಿ, ಗೋಮಾಳವನ್ನು ಉಳಿಸುವಂತೆ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಅವರನ್ನು ಆಡಳಿತ ಮಂಡಳಿ ಸದಸ್ಯರು ಆಗ್ರಹಿಸಿದರು. ಈಗಾಗಲೇ ಪ್ರಸ್ತಾವನೆ ಬಂದAತಹ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿದ್ದು, ಇಲಾಖೆಯಿಂದ ಲಭ್ಯವಿರುವ ಇತರ ಯೋಜನೆಗಳ ಮಾಹಿತಿಯನ್ನು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಉಮೇಶ್ ಮಾಹಿತಿ ನೀಡಿದರು. ಬಸವನಹಳ್ಳಿ ಸರ್ವೆ ನಂಬರ್ ೧/೧ ಸರ್ಕಾರಿ ಬಡಾವಣೆ ಹಾಗೂ ಬಸವನಹಳ್ಳಿ ಮುರಾರ್ಜಿ ಶಾಲೆ ಹಾಗೂ ಗುಡ್ಡೆಹೊಸೂರು ಪ್ರಾಥಮಿಕ ಶಾಲಾ ಆವರಣಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಕ್ರಮ ಪಂಚಾಯಿತಿ ಅಧ್ಯಕ್ಷರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸದ್ಯದಲ್ಲಿ ಜೇನು ಕುರುಬರ ಸರ್ವೆ ಕಾರ್ಯ ನಡೆಯಲಿದೆ ಎಂಬುದಾಗಿ ಮಾಹಿತಿ ನೀಡಿದರು. ಪಂಚಾಯಿತಿಯಿAದ ಸಂಜೀವಿನಿ ಸಂತೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡಲು ಬಯಸಿದರೆ ಸದರಿ ಸಂಜೀವಿನಿ ಸಂತೆಯಲ್ಲಿ ಪ್ರತ್ಯೇಕ ಮಳಿಗೆಗಳನ್ನು ನೀಡುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಕುಮಾರಸ್ವಾಮಿ ಸ್ವಾಗತಿಸಿದರು.