ಸೋಮವಾರಪೇಟೆ, ನ. ೨೫: ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್, ಕೇಂದ್ರ ಸಹಕಾರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ೭ನೇ ಅಖಿಲ ಭರತ ಸಹಕಾರ ಸಪ್ತಾಹ- ರಾಷ್ಟಿçÃಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ ಉದ್ಘಾಟಿಸಿದರು. ಜಿಲ್ಲಾ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ್ ಸಹಕಾರ ಧ್ವಜಾರೋಹಣ ಮಾಡಿದರು. ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ವಹಿಸಿದ್ದರು. ಹಿರಿಯ ಸಹಕಾರಿಗಳಾದ ಬಿ.ಡಿ. ಮಂಜುನಾಥ್, ಬಿ.ಎಸ್. ಅನಂತರಾಮ್, ಎಂ.ಎಸ್. ಲಕ್ಷಿö್ಮÃಕಾಂತ್, ಎನ್.ಎಂ. ರಾಜಶೇಖರಪ್ಪ ಅವರುಗಳನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಅವರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಸಹಕಾರ ಯೂನಿಯನ್ ನಿರ್ದೇಶಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಹೆಚ್.ಕೆ. ಮಾದಪ್ಪ, ಗೌಡಳ್ಳಿ ವಿಎಸ್‌ಎಸ್‌ಎನ್ ಅಧ್ಯಕ್ಷ ಎಸ್.ಬಿ. ಭರತ್‌ಕುಮಾರ್, ಮಾದಾಪುರ ವಿ.ಎಸ್.ಎಸ್.ಎನ್. ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ, ಚೌಡ್ಲು ವಿ.ಎಸ್.ಎಸ್.ಎನ್. ಅಧ್ಯಕ್ಷ ಕೆ.ಟಿ. ಪರಮೇಶ್, ಸೋಮವಾರಪೇಟೆ ವಿಎಸ್‌ಎಸ್‌ಎನ್ ಉಪಾಧ್ಯಕ್ಷ ಹೆಚ್.ಕೆ. ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.