ವೀರಾಜಪೇಟೆ, ನ. ೨೫: ವೀರಾಜಪೇಟೆಯ ಬಾಳುಗೋಡುವಿನಲ್ಲಿರುವ ಅಗ್ನಿ ಚಾಮುಂಡಿ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆ ಸೋಮವಾರ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ಪ್ರತಿ ವರ್ಷದಂತೆ ಕಾರ್ತಿಕ ಮಾಸದಲ್ಲಿ ಬರುವ ಎಲ್ಲಾ ಸೋಮವಾರಗಳಂದು ಚಾಮುಂಡಿ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಾಲಯದ ಆವರಣದಲ್ಲಿ ಮಹಿಳೆಯರು ಕಾರ್ತಿಕ ಮಾಸದ ಕಡೆ ಸೋಮವಾರದ ಪ್ರಯುಕ್ತ ದೀಪಗಳನ್ನು ಹಚ್ಚಿ ಹರಕೆ ತೀರಿಸಿದರು.