ಕೂಡಿಗೆ, ನ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕೂಡಿಗೆ ಗ್ರಾಮ ವ್ಯಾಪ್ತಿಯಲ್ಲಿ ಹಿಂದೂ ರುದ್ರಭೂಮಿ ಮತ್ತು ಕಾವೇರಿ ನದಿಯ ತೆರಳುವ ದಾರಿ ಮತ್ತು ಸೋಪಾನಕಟ್ಟೆಯನ್ನು ದುರಸ್ತಿಪಡಿಸಿ ಸಾರ್ವಜನಿಕರು ಕಾವೇರಿ ನದಿಗೆ ತೆರಳಲು ಅನುವು ಮಾಡಬೇಕೆಂದು ಗ್ರಾಮಸ್ಥರರಾದ ಕೆ.ಪಿ. ಸೋಮಣ್ಣ, ಕೆ.ಎಂ. ನಾಗರಾಜ್ ಒತ್ತಾಯ ಮಾಡಿದರು.

ಗ್ರಾಮ ಪಂಚಾಯಿತಿ ಸಮೀಪದಲ್ಲಿರುವ ಕೂಡಿಗೆ ಸರ್ಕಲ್‌ನಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸುವಂತೆ ಗ್ರಾಮಸ್ಥರಾದ ಕೆ.ಇ. ರಾಜಣ್ಣ, ಗಣೇಶ್ ಗಮನಕ್ಕೆ ತಂದರು

ಸಭೆಯ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಕೆ.ಟಿ. ಗಿರೀಶ್ ಮಾತನಾಡಿ, ಕೂಡಿಗೆ ಸರ್ಕಲ್‌ನಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಕ್ರಿಯಾ ಯೋಜನೆ ಮತ್ತು ಅದಕ್ಕೆ ಸಂಬAಧಿಸಿದ ಪತ್ರ ವ್ಯವಹಾರವನ್ನು ಮಾಡಲಾಗಿದೆ. ಶೌಚಾಲಯ ನಿರ್ಮಾಣಕ್ಕೆ ಸಂಬAಧಿಸಿದAತೆ ಜಾಗದ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿದೆ. ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆಯ ಸಹಕಾರದೊಂದಿಗೆ ಜಾಗವನ್ನು ಗುರುತಿಸಿ ಶೌಚಾಲಯ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗೆ ತಮ್ಮ ಗ್ರಾಮಗಳ ಕಾಮಗಾರಿ ಪಟ್ಟಿಯನ್ನು ತಿಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ.ಪಿ. ಹಮೀದ್, ಮೋಹಿನಿ, ಅನಂತ, ವಾಣಿ, ಮಂಗಳಾ, ನೋಡಲ್ ಅಧಿಕಾರಿಯಾಗಿ ಕೂಡಿಗೆ ಕೋಳಿ ಸಾಕಾಣಿಕೆ ಕೇಂದ್ರದ ಹಿರಿಯ ಪಶು ವೈದ್ಯಾಧಿಕಾರಿ ಡಾ. ಕೆ. ನಾಗರಾಜ್, ಅಭಿವೃದ್ಧಿ ಅಧಿಕಾರಿ ಮಂಜುಳಾ, ಕಾರ್ಯದರ್ಶಿ ಪುನೀತ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.