ಮಡಿಕೇರಿ, ನ. ೨೬: ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ತಾ. ೨೭ ರಿಂದ (ಇಂದಿನಿAದ) ತಾ. ೨೯ ರವರೆಗೆ ನಡೆಯಲಿದೆ. ತಾ. ೨೭ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ. ಕ್ರೀಡಾಕೂಟದ ಸಮಾರೋಪ ಸಮಾರಂಭ ತಾ. ೨೯ರಂದು ಸಂಜೆ ೪ ಗಂಟೆಗೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮೈಸೂರು ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ಡಾ. ಬೋರಲಿಂಗಯ್ಯ ಎಂ.ಬಿ ಪಾಲ್ಗೊಳ್ಳಲಿದ್ದಾರೆ.