ಸಿದ್ದಾಪುರ, ನ. ೨೬: ರಕ್ತದಾನ ಶ್ರೇಷ್ಠದಾನ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅಭಿಪ್ರಾಯಪಟ್ಟರು. ಸಿದ್ದಾಪುರದ ಅಗಸ್ತೆö್ಯÃಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್, ಸಂಜೀವಿನಿ ಒಕ್ಕೂಟ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರ ಮತ್ತು ಅಂಗಾAಗ ದಾನ, ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವನಿಗೆ ಆರೋಗ್ಯ ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಲವಾರು ರೋಗಗಳಿಗೆ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ. ರಕ್ತದಾನ ಶಿಬಿರವನ್ನು ಆಯೋಜಿಸಿರು ವುದು ಸಮಾಜದ ದೃಷ್ಟಿಯಿಂದ ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ರಕ್ತದಾನ ಕೇಂದ್ರದ ನಿರ್ವಹಣಾಧಿಕಾರಿ ಕರುಂಬಯ್ಯ ಮಾತನಾಡಿ, ೧೮ ವರ್ಷಗಳು ಕಳೆದ ಬಳಿಕ ಮಕ್ಕಳು ಕೂಡ ರಕ್ತದಾನ ಶಿಬಿರದಲ್ಲಿ ಭಾಗವಹಿಸಬಹುದೆಂದರು. ಇತ್ತೀಚಿನ ದಿನಗಳಲ್ಲಿ ರಕ್ತ ಹೀನತೆಯಿಂದ ಹಲವಾರು ಮಂದಿ ಬಳಲುತ್ತಿದ್ದು, ರಕ್ತದ ಸಮಸ್ಯೆ ಎದುರಾಗುತ್ತಿದೆ ಎಂದರು. ರಕ್ತದಾನ ಶಿಬಿರದಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವುದು ಉತ್ತಮ ಕಾರ್ಯ ಎಂದರು. ರಕ್ತದ ಬೇಡಿಕೆಗಳು ಹೆಚ್ಚಾಗುತ್ತಿದ್ದು, ಆರೋಗ್ಯ ವಂತರು ೩-೪ ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಿದ್ದಾಪುರದ ವೈದ್ಯಾಧಿಕಾರಿ ಡಾ. ರೇವಣ್ಣ, ರೆಡ್‌ಕ್ರಾಸ್ ಸೊಸೈಟಿ ಪೊನ್ನಂಪೇಟೆಯ ಬಿ.ಎನ್. ಪ್ರಕಾಶ್, ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ, ಸಿದ್ದಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಬಿ.ಆರ್. ಆಶಾ ಕುಮಾರಿ, ಸಂಜೀವಿನಿ ಒಕ್ಕೂಟದ ಎಂ.ಎ. ಯಮುನಾ, ತುಳಸಿ, ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಸುರೇಶ್, ಹೆಚ್.ಬಿ. ರಮೇಶ್, ಬಾವ ಮಾಲ್ದಾರೆ ಸೇರಿದಂತೆ ಇನ್ನಿತರರು ಹಾಜರಿದ್ದರು.