ಚೆಯ್ಯಂಡಾಣೆ: ಅನ್ವಾರುಲ್ ಹುದಾ ಕಾಲೇಜ್ ಆಫ್ ಇಂಟಿಗ್ರೇಟೆಡ್ ಸ್ಟಡೀಸ್ ವತಿಯಿಂದ ಸಂವಿಧಾನ ದಿನವನ್ನು ಹಿರಿಯ ಉಪನ್ಯಾಸಕರಾದ ಯಾಕೂಬ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ಜುನೈದ್ ಅನ್ವಾರಿಯವರು ಸಂದೇಶ ಭಾಷಣ ನಡೆಸಿದರು. ವಿದ್ಯಾರ್ಥಿಗಳಾದ ಸಯ್ಯಿದ್ ಸಾಬಿತ್ ಅಲ್ ಐದರೂಸಿ ಹಾಗೂ ಅನ್ವರ್ ಸ್ವಾದಿಕ್ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರೆ ಶುಹೈಬ್ ಸ್ವಾಗತಿಸಿ ಅಜ್ಮಲ್ ಖಾನ್ ವಂದಿಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವೀರಾಜಪೇಟೆ: ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ... ಇವೇ ನಮ್ಮ ಸಂವಿಧಾನದ ತತ್ವ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಿಳಿಸಿದರು. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.

ಇಡೀ ಪ್ರಪಂಚದಲ್ಲಿರುವ ಲಿಖಿತ ಸಂವಿಧಾನದಲ್ಲಿ, *ರೀಬಿಲ್* ಮಾಡುವ ಅವಕಾಶವಿಲ್ಲ. ಆದರೆ ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ, ಕಾನೂನನ್ನು ಹಿಂದಕ್ಕೆ ಪಡೆಯುವ ಅವಕಾಶ ಕಲ್ಪಿಸಿದ್ದಾರೆ. ಆರ್ಟಿಕಲ್ ೧೪, ಸಮಾನತೆ, ಸಮಾಜದಲ್ಲಿ ಎಲ್ಲಾ ಜಾತಿ, ಧರ್ಮ, ಲಿಂಗ, ಪಂಗಡ ಸಮಾನವಾಗಿ ಜೀವನ ನಡೆಸಬೇಕು ಎಂದು ತಿಳಿಸುತ್ತದೆ. ಸಂವಿಧಾನ ಅರ್ಥ ಮಾಡಿಕೊಂಡರೆ, ಈ ಸಂವಿಧಾನ ನಮ್ಮನ್ನು, ನಮ್ಮ ಪಕ್ಷವನ್ನು ರಕ್ಷಣೆ ಮಾಡುತ್ತದೆ. ಸಂವಿಧಾನದ ಮೇಲೆ ಜನರ ವಿಶ್ವಾಸ ಕಳೆದು ಕೊಂಡಾಗ ನಮಗೆ ಅಪಾಯಕಾರಿಯಾದಂತ ಪರಿಸ್ಥಿತಿ ಉಂಟಾಗುತ್ತದೆ. ಸಂವಿಧಾನವನ್ನು ಅರ್ಥಮಾಡಿ ಕೊಂಡAತೆ ಸಂವಿಧಾನದ ಪೀಠಿಕೆ ಉದಾರಣೆಯಾಗಿದೆ ಎಂದು ಅವರು ತಿಳಿಸಿದರು.

ದೇಶದ ಸಂಪತ್ತು ಕ್ರೋಢೀಕರಣ ವಾಗಬಾರದು. ಸಮಾನವಾಗಿ ಹಂಚಿಕೆ ಮಾಡುವುದೇ ಸಂವಿಧಾನದ ನಡೆ. ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಸಹಿ ಮಾಡಿದ ಐದು ಗ್ಯಾರೆಂಟಿ ಕಾರ್ಡನ್ನು ಮನೆ ಮನೆಗೆ ನೀಡಿದ್ದೇವೆ. ಸಂವಿಧಾನ ಓದಿಕೊಂಡವರು ನಮ್ಮ ಐದು ಗ್ಯಾರಂಟಿಗಳ ಟೀಕೆ ಮಾಡಲು ಸಾಧ್ಯವಿಲ್ಲ ಎಂದರು. ಬುದ್ಧಿಶಕ್ತಿಯಿಂದ ಸಂಪತ್ತನ್ನು ಗಳಿಸುವ ಶಕ್ತಿ ಸಂವಿಧಾನದಲ್ಲಿದೆ. ಆದರೆ ದೇಶದ ಸಂಪತ್ತು ಕ್ರೋಢೀಕರಣ ಮಾಡಲು ಬಿಡಬಾರದು. ದೇಶದ ಸಂಪತ್ತನ್ನು ಬಡವರಿಗೆ, ಶೋಷಿತರಿಗೆ, ಹಿಂದುಳಿದ ವರ್ಗದವರಿಗೆ, ಅಲ್ಪಸಂಖ್ಯಾತರಿಗೆ ಹಂಚುವ ಕೆಲಸವನ್ನು ಗ್ಯಾರಂಟಿ ಮೂಲಕ ಮಾಡಿದ್ದೇವೆ. ಸಂವಿಧಾನದ ಆಶಯವನ್ನು ಎತ್ತಿ ಹಿಡಿದಿದ್ದೇವೆ. ಸಂವಿಧಾನವನ್ನು ಅರಿತು, ಸಂವಿಧಾನದ ಆಶಯವನ್ನು, ಸಂವಿಧಾನದ ತತ್ವಗಳನ್ನು ಜನರಿಗೆ ಮುಟ್ಟುವ ಕೆಲಸವನ್ನು ಮಾಡುವ ಮೂಲಕ ಪಕ್ಷವನ್ನು ಕಟ್ಟುವ ಕೆಲಸವನ್ನು ಮಾಡಬೇಕೆಂದು ತಿಳಿಸಿದರು.ಸೋಮವಾರಪೇಟೆ: ಭಾರತ ಸಂವಿಧಾನ ಅಂಗೀಕಾರ ದಿನಾಚರಣೆಯನ್ನು ಸೋಮವಾರಪೇಟೆ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಣೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ಬಿ. ಬಿ. ಸತೀಶ್ ವಹಿಸಿದ್ದರು.

ಈ ಸಂದರ್ಭ ಸೋಮವಾರಪೇಟೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ ಭೇಟು, ಉಪಾಧ್ಯಕ್ಷ ಸೈಮನ್, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಎ. ಲಾರೆನ್ಸ್, ಕಾರ್ಯದರ್ಶಿ ಸುನಿಲ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಅಬ್ದುಲ್ ರಜಾಕ್ ಕೆ.ಎ., ಮಹಿಳಾ ಕಾಂಗ್ರೆಸ್ ಪ್ರಮುಖರಾದ ಶುಭಾ, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಸುಹಾಸ್, ಪದಾಧಿಕಾರಿ ಸುಚೇತನ್ ಸ್ವರೂಪ್, ಸಾಗರ್ ಉಪಸ್ಥಿತರಿದ್ದರು.ವೀರಾಜಪೇಟೆ: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಭೋದಿಸಿದರು.

ಬಳಿಕ ಮಾತನಾಡಿದ ಅವರು ಸಂವಿಧಾನವು ಶ್ರೇಷ್ಠ ಕಾನೂನು ಆಗಿದ್ದು ಅದು ರಾಷ್ಟçದ ಐಕ್ಯತೆಯ ಪ್ರತೀಕವಾಗಿದೆ. ಪ್ರಜೆಗಳಿಗೆ ಹಕ್ಕನ್ನು ನೀಡಿ ಕರ್ತವ್ಯವನ್ನು ಪಾಲಿಸಲು ನಿರ್ದೇಶನವನ್ನು ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟçಕ್ಕೆ ಸಂವಿಧಾನವೇ ಮೂಲಧಾರವಾಗಿದೆ ಎಂದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವೀರಾಜಪೇಟೆ: ಸಂವಿಧಾನ ಎಲ್ಲಾ ಕಾನೂನುಗಳ ತಾಯಿ. ಸಂವಿಧಾನ ಜೀವನದ ಅಂಗವಾಗಿದ್ದು ನಮ್ಮೆಲ್ಲ ಕರ್ತವ್ಯ, ಕೆಲಸಗಳು ಸರಾಗವಾಗಿ ನಡೆಯಲು ಮೂಲ ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ, ತಾಲೂಕು ಕಾನೂನು ಸೇವೆಗಳ ಸಮಿತಿ ವೀರಾಜಪೇಟೆ, ವೀರಾಜಪೇಟೆ ಕಾವೇರಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ನಾವೆಲ್ಲ ಇಂದು ಇಷ್ಟು ಶಿಸ್ತಿನಿಂದ ಹಾಗೂ ಸ್ವತಂತ್ರದಿAದ ಬದುಕಲು ಸಂವಿಧಾನವೇ ಮೂಲ ಕಾರಣ. ಹೊರಗಿನ ಕೆಲವು ದೇಶಗಳೊಂದಿಗೆ ನಮ್ಮ ದೇಶವನ್ನು ಹೋಲಿಕೆ ಮಾಡಿ ನೋಡಿದಂತಹ ಸಂದರ್ಭದಲ್ಲಿ ನಮಗೆ ಸಂವಿಧಾನದ ಮಹತ್ವ ಏನೆಂದು ತಿಳಿಯುತ್ತದೆ. ನಮ್ಮ ಸಂವಿಧಾನ ಅದ್ಭುತವಾದ ಜೀವಂತ ಸಂವಿಧಾನವಾಗಿದ್ದು ಇದನ್ನು ರಚಿಸಲು ಪಟ್ಟಂತಹ ಶ್ರಮವನ್ನು ಅರಿಯುವುದರೊಂದಿಗೆ, ರಚಿಸಿದಂತಹ ಅಂಬೇಡ್ಕರ್ ಹಾಗೂ ರಚನಾ ಸಮಿತಿಯಲ್ಲಿದ್ದ ಪ್ರತಿಯೊಬ್ಬರನ್ನು ಸ್ಮರಿಸಬೇಕು. ಸಂವಿಧಾನವು ಎಲ್ಲಾ ಕಾನೂನಿನ ತಾಯಿ ಎಂಬುದನ್ನು ಅರಿತು ಪ್ರತಿಯೊಬ್ಬರ ಹಕ್ಕು ಕರ್ತವ್ಯಗಳನ್ನು ಗೌರವಿಸಿ ನಾವು ಪಾಲಿಸಬೇಕೆಂದರು.

ಮತ್ತೋರ್ವ ಅತಿಥಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಮಂಜುನಾಥ್ ಮಾತನಾಡಿ ದೈನಂದಿನ ಜೀವನದಲ್ಲಿ ಸಂವಿಧಾನವು ಅವಿಭಾಜ್ಯ ಅಂಗವಾಗಿದೆ. ಸಂವಿಧಾನದ ಪ್ರಸ್ತಾವನೆಯನ್ನು ನಾವು ಅರ್ಥೆÊಸಿಕೊಂಡರೆ ಸಂಪೂರ್ಣ ಸಂವಿಧಾನವನ್ನು ಅರ್ಥೆÊಸಿಕೊಂಡAತೆ. ಸಂವಿಧಾನ ಎಲ್ಲಾ ರೀತಿಯಲ್ಲೂ ನಮಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು . ನಾವು ನಮ್ಮ ಹಕ್ಕನ್ನು ಅನುಭವಿಸುವುದರೊಂದಿಗೆ ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸಿದರೆ ಉತ್ತಮ ಸಮಾಜವನ್ನು ನಿರ್ಮಿಸಬಹುದು. ಸಂವಿಧಾನವನ್ನು ಪ್ರತಿನಿತ್ಯದ ಜೀವನದಲ್ಲಿ ಅಳವಡಿಸುವುದರಿಂದ ಸಮಾಜದಲ್ಲಿ ಆದರ್ಶಪ್ರಾಯವಾಗಿ ಬದುಕಬಹುದೆಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರದೀಪ ಪೊತೆದಾರ ಅವರು ಮಾತನಾಡಿ, ಸಂವಿಧಾನವು ನಮಗೆ ವಿವಿಧ ಹಕ್ಕುಗಳನ್ನು ನೀಡಿದೆ. ಹಕ್ಕುಗಳನ್ನು ಅನುಭವಿಸುವುದರೊಂದಿಗೆ ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸಬೇಕು ಹಾಗೂ ಇತರರ ಹಕ್ಕುಗಳಿಗೆ ನಮ್ಮಿಂದ ತೊಂದರೆಯಾಗದAತೆ ಸಂವಿಧಾನವನ್ನು ಗೌರವಿಸ ಬೇಕೆಂದರು. ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ.ಪೂವಣ್ಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಇದರ ಕಾರ್ಯದರ್ಶಿ ವೇದಿಕಾ ರೆಡ್ಡಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಇದರ ಪ್ರಾಂಶುಪಾಲೆ ಪಿ.ಕೆ. ವಿನೀತಾ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ದ ಟ್ರಸ್ಟಿ ಪ್ರಶಾಂತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ, ಉಪನ್ಯಾಸಕರಾದ ಡಾ.ವೀಣಾ, ಕಾವೇರಿ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು, ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.ವೀರಾಜಪೇಟೆ: ಜನರು ಆಸ್ತಿ ಮಾಡುವ ಬದಲು ತಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಅದಕ್ಕಾಗಿ ಅವರಿಗೆ ಅಗತ್ಯವಾದ ಶಿಕ್ಷಣ ನೀಡಿ ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಹೇಳಿದರು.

ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ವೀರಾಜಪೇಟೆ, ಪೊನ್ನಂಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ವೀರಾಜಪೇಟೆ ಪುರಸಭೆ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಇಂದು ದೇಶದಲ್ಲಿ ಅನೇಕ ಜಾತಿ ಧರ್ಮಗಳಿದ್ದರು ಎಲ್ಲರು ಒಂದುಗೂಡಿ ಮುನ್ನಡೆಯುತ್ತಿದ್ದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ. ಸಂವಿಧಾನದ ಅರಿವು ಹೊಂದುವ ಮೂಲಕ ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರುವ ಅಂಬೇಡ್ಕರ್ ಭವನ ಸಮಿತಿ ಸದಸ್ಯರಾದ ವಿ.ಕೆ ಸತೀಶ್ ಮಾತನಾಡಿ ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ ಎಂದರು.

ಅಂಬೇಡ್ಕರ್ ಭವನ ಸಮಿತಿ ಸದಸ್ಯರಾದ ವೀರಭದ್ರಯ್ಯ ಮಾತನಾಡಿದರು. ಅಮ್ಮಸಂದ್ರ ಸುರೇಶ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ವಹಿಸಿ ಮಾತನಾಡಿದರು.

ಗಿರೀಶ್ ಮತ್ತು ಸಂಗಡಿಗರು ಕ್ರಾಂತಿ ಗೀತೆ ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿ.ಪೇ ತಾಲೂಕು ತಹಶೀಲ್ದಾರ್ ಪ್ರವೀಣ್, ಪುರಸಭೆಯ ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕವಿತಾ, ಮುಖಂಡರಾದ ಮಹದೇವ್, ರಜನಿಕಾಂತ್, ಗಣೇಶ್, ಪರಶುರಾಮ್ ಇತರರು ಉಪಸ್ಥಿತರಿದ್ದರು.

ಮೊದಲಿಗೆ ಶಾಲಾ ಸ್ಕೌಟ್ ಮತ್ತು ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕ ಪ್ರಮುಖರಿಂದ ಪಟ್ಟಣದ ಮಾರಿಗುಡಿಯಿಂದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಲಾಯಿತು.ವೀರಾಜಪೇಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ. ಘಟಕ, ಎನ್.ಎಸ್.ಎಸ್ ಮತ್ತು ರಾಜ್ಯಶಾಸ್ತç ವಿಭಾಗದ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು.

ಭಾರತದ ಸಂವಿಧಾನ ಪ್ರಸ್ತಾವನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಅರ್ಜುನ್ ಮೌರ್ಯ ಅವರು ಸಂವಿಧಾನ ಪ್ರಸ್ತಾವನೆ ಮತ್ತು ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ವಯವಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಟ್ಟ ಕೀರ್ತಿ ನಮ್ಮದು. ಸ್ವಾತಂತ್ರö್ಯ, ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯವನ್ನೊಳಗೊಂಡ ನಮ್ಮ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಮತ್ತು ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದರು.

ಕೊಡಗು ವಿಶ್ವವಿದ್ಯಾನಿಲಯದ ರಾ.ಸೇ.ಯೋ.ಯ ನೋಡಲ್ ಅಧಿಕಾರಿ ಪ್ರೊ. ದಯಾನಂದ ಕೆ.ಸಿ. ಅವರು ಮಾತನಾಡಿ, ಭಾರತೀಯ ಸಂವಿಧಾನವು ರಚನೆ, ಬೆಳವಣಿಗೆಯನ್ನು ವಿವರಿಸುತ್ತಾ ಸಂವಿಧಾನದ ಆಶಯಗಳು ಉಳಿಯಬೇಕಾದರೆ ಅದನ್ನು, ಕೇವಲ ತಾತ್ವಿಕ ಸಿದ್ಧಾಂತವನ್ನಾಗಿ ನೋಡದೇ, ಪ್ರತಿಯೊಬ್ಬ ಭಾರತೀಯರ ಬದುಕಿನ ಮೂಲ ತಳಹದಿಯಾಗಿರಬೇಕೆಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ. ಅವರು ಮಾತನಾಡಿ ನಮ್ಮ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನವಾಗಿದೆ. ನಮ್ಮ ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಗೌರವ ಮತ್ತು ಪ್ರತಿಷ್ಠೆಯ ರೂಪದಂತಿರುವುದು ನಮ್ಮ ಹೆಮ್ಮೆ. ಸಂವಿಧಾನದ ಈ ಮೌಲ್ಯವನ್ನು ಗೌರವಿಸಿ, ಅನುಸರಿಸುವ ಮೂಲಕ ಸಮಾಜ ಮತ್ತಷ್ಟು ಸದೃಢವಾಗುತ್ತದೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಸ್ತಾವನೆ ಪಠಣೆ, ಘೋಷವಾಕ್ಯ ಬರಹ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತç ವಿಭಾಗದ ಉಪನ್ಯಾಸಕರಾದ ಹೇಮಂತ್ ಕುಮಾರ್ ಬಹುಮಾನ ನೀಡಿದರು.

ಸಂವಿಧಾನ ದಿನಾಚರಣೆಯ ಬಗ್ಗೆ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ರುದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ. ಬಸವರಾಜು ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿಹಾಲ, ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ಕು.ದಿವ್ಯ ಎಂ.ಬಿ. ರಾಷ್ಟಿçÃಯ ಸೇವಾ ಯೋಜನೆಯ ಸ್ವಯಂ ಸೇವಕ-ಸೇವಕಿಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಮಡಿಕೇರಿ, ನ. ೨೭: ಸಂವಿಧಾನವು ಭಾರತ ದೇಶದ ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದ್ದು, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ÷್ಯ ಮತ್ತು ನ್ಯಾಯವನ್ನು ಬಲಪಡಿಸುವ ಮಹತ್ವದ ದಾಖಲೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತç ವಿಭಾಗ ಮತ್ತು ಎನ್‌ಸಿಸಿ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ಸಭಾ ಸದಸ್ಯರ ಅಮೂಲ್ಯ ಕೊಡುಗೆಯನ್ನು ಅವರು ಸ್ಮರಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರುಗಳಾದ ಪ್ರೊ.ತಿಪ್ಪೇಸ್ವಾಮಿ ಇ, ಪ್ರೊ.ಗಾಯತ್ರಿದೇವಿ, ಪ್ರೊ.ಶ್ರೀಧರ್ ಹೆಗಡೆ, ತಳವಾರ್ ಬಿ.ಹೆಚ್ ಹಾಗೂ ಉಪನ್ಯಾಸಕರಾದ ಖುರ್ಷಿದ ಭಾನು, ನೀವಿಯಾ ಮೇದಪ್ಪ ಹಾಗೂ ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜ್ಯಶಾಸ್ತç ವಿಭಾಗದ ಉಪನ್ಯಾಸಕರಾದ ಡಾ.ಕೆ.ಎಸ್.ಶೃಂಗಾರ್ ಕಾರ್ಯಕ್ರಮವನ್ನು ನಿರೂಪಿಸಿದರು.ಕುಶಾಲನಗರ: ಸಂವಿಧಾನವನ್ನು ಗೌರವಿಸುವುದು ಮತ್ತು ಅದರಲ್ಲಿ ಉಲ್ಲೇಖಿಸಿರುವ ಬಹುವಿಧದ ಸಂಸ್ಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಮಹತ್ತರ ಜವಾಬ್ದಾರಿಯಾಗಿದೆ ಎಂದು ಶನಿವಾರಸಂತೆ ವಿಘ್ನೇಶ್ವರ ವಿದ್ಯಾ ಸಂಸ್ಥೆಯ ಉಪನ್ಯಾಸಕ ಜಯಕುಮಾರ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪಟ್ಟಣದ ಕಾರು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಅರಿವು ಮೂಡಿಸುವುದು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಶಕ್ತಿ ಹೊಂದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಮಾತನಾಡಿ, ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದೆ. ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ, ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನವನ್ನು ರೂಪಿಸುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದರೆ, ಅದಕ್ಕೆ ಕಾರಣ, ನಮ್ಮ ಸಶಕ್ತವಾದ ಸಂವಿಧಾನ ಎಂದರು.

ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ನಾಗೇಶ್, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಅಧ್ಯಕ್ಷ ಧಾಮೋದರ್, ಅಂಬೇಡ್ಕರ್ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಜಯಪ್ರಕಾಶ್, ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಕೃಷ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ, ಶ್ರೀನಿವಾಸ್, ಪುರಸಭೆ ಮಾಜಿ ಸದಸ್ಯೆ ಜಯ ಲಕ್ಷಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಶಾಲೆಯ ವಿಧ್ಯಾರ್ಥಿಗಳು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿಗಳು ಸಂಘ ಸಂಸ್ಥೆಗಳ ಪ್ರಮುಖರು ಮೆರವಣಿಗೆ ನಡೆಸಿದರು.